ಅಹ್ಮದಾಬಾದ್: ಇಂಗ್ಲೆಂಡ್ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ತೋರಿದ ಭಾರತ ತಂಡದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 32 ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2 ಬಾರಿ 30ಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.
ರವಿಚಂದ್ರನ್ ಅಶ್ವಿನ್ ಕೊನೆಯ ಪಂದ್ಯದಲ್ಲಿ 8 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಒಟ್ಟಾರೆ ಸರಣಿಯಲ್ಲಿ 32 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಟೆಸ್ಟ್ ಸರಣಿಯಲ್ಲಿ 30+ ವಿಕೆಟ್ಗಳನ್ನು 2 ಬಾರಿ ಪಡೆದ ಮೊದಲ ಭಾರತೀಯ ಮತ್ತು 4 ಪಂದ್ಯಗಳ ಸರಣಿಯಲ್ಲಿ ಈ ಸಾಧನೆ ಮಾಡಿದ ವಿಶ್ವದ ಏಕಮಾತ್ರ ಬೌಲರ್ ಎಂಬ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ.