ಕರ್ನಾಟಕ

karnataka

ETV Bharat / sports

ಸರಣಿ ಗೆಲುವಿನತ್ತ ಆಸೀಸ್ ಚಿತ್ತ: ಗೆಲ್ಲಲೇಬೇಕಾದ ಒತ್ತಡದಲ್ಲಿ ಕೊಹ್ಲಿ ಬಳಗ - ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯ

ಐಪಿಎಲ್ ಸಮಯದಲ್ಲಿ ಅಬ್ಬರಿಸದ ಆಸೀಸ್ ಆಟಗಾರರು ತವರಿನಲ್ಲಿ ಭರ್ಜರಿ ಪ್ರದರ್ಶನ ತೋದಿದ್ದು, ದ್ವಿತೀಯ ಪಂದ್ಯದಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸುವ ಹುಮ್ಮಸ್ಸಿನಲ್ಲಿದ್ದಾರೆ.

AUS vs IND 2nd ODI
ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯ

By

Published : Nov 28, 2020, 4:19 PM IST

Updated : Nov 29, 2020, 5:42 AM IST

ಸಿಡ್ನಿ(ಆಸ್ಟ್ರೇಲಿಯಾ):ನೀರಸ ಬೌಲಿಂಗ್ ಪ್ರದರ್ಶನ ಮತ್ತು ಅಗ್ರ ಕ್ರಮಾಂಕದ ಬ್ಯಾಟ್ಸ್​​ಮನ್​ಗಳ ವೈಫಲ್ಯದಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲುಕಂಡಿದ್ದ ಭಾರತ ತಂಡ ಸರಣಿಯನ್ನು ಜೀವಂತವಾಗಿ ಉಳಿಸಿಕೊಳ್ಳು ನಾಳಿನ ಪಂದ್ಯದಲ್ಲಿ ಗೆಲ್ಲೇಬೇಕಾದ ಒತ್ತಡದಲ್ಲಿದೆ.

ಅತಿಥೆಯ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ ಎಂದು ಮೊದಲ ಏಕದಿನ ಪಂದ್ಯದಿಂದ ಸಾಬೀತಾಗಿದೆ. ಐಪಿಎಲ್ ಸಮಯದಲ್ಲಿ ಅಬ್ಬರಿಸದ ಆಸೀಸ್ ಆಟಗಾರರು ತವರಿನಲ್ಲಿ ಭರ್ಜರಿ ಪ್ರದರ್ಶನ ತೋದಿದ್ದು, ದ್ವಿತೀಯ ಪಂದ್ಯದಲ್ಲೂ ಅದೇ ಪ್ರದರ್ಶನವನ್ನು ಮುಂದುವರೆಸುವ ಹುಮ್ಮಸ್ಸಿನಲ್ಲಿದ್ದಾರೆ.

ನಾಳಿನ ಪಂದ್ಯದಲ್ಲಿ ಆರಂಭಿಕ ಜೋಡಿ ಉತ್ತಮ ಪ್ರದರ್ಶನ ತೋರಬೇಕಿದೆ. ಮೊದಲ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದ ಅಗರ್ವಾಲ್, ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ ಮಿಂಚಬೇಕಿದೆ.

ಆ್ಯರೋನ್ ಫಿಂಚ್

ಇತ್ತ ಬೌಲಿಂಗ್ ವಿಭಾಗ ಕೂಡ ಕೋಂಚ ಮೊನಚಾಗಬೇಕಿದೆ. ವೇಗಿ ಸೈನಿ ಮತ್ತು ಚಹಾಲ್ ಅತಿ ಹೆಚ್ಚು ರನ್​ ಬಿಟ್ಟುಕೊಡುವ ಮೂಲಕ ದುಬಾರಿಯಾಗಿದ್ದರು, ಆಸೀಸ್ ವಿರುದ್ಧ ಗೆಲುವು ಸಾಧಿಸಬೇಕಾದ್ರೆ ಬೌಲಿಂಗ್ ಕೊಂಚ ಸುಧಾರಿಸಬೇಕಿದೆ. ವೇಗಿ ಜಸ್ಪ್ರೀತ್ ಬುಮ್ರಾ ಐಪಿಎಲ್​ನಂತೆ ಆಸೀಸ್ ವಿರುದ್ಧವೂ ಮಿಂಚಬೇಕಿದೆ.

ಸಂಭಾವ್ಯ ಭಾರತ ತಂಡ:ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಶುಬ್ಮನ್ ಗಿಲ್​, ಶ್ರೇಯಸ್ ಐಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಕೆ.ಎಲ್.ರಾಹುಲ್( ವಿ.ಕೀ. ಮತ್ತು ಉ.ನಾಯಕ), ಜಸ್ಪ್ರೀತ್ ಬುಮ್ರಾ, ಮೊಹಮ್ಮದ್​ ಶಮಿ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಹಾಲ್, ಶಾರ್ದುಲ್ ಠಾಕೂರ್​

ಸಂಭಾವ್ಯ ಆಸ್ಟ್ರೇಲಿಯಾ ತಂಡ:ಆ್ಯರೋನ್ ಫಿಂಚ್(ನಾಯಕ), ಸೀನ್ ಅಬ್ಬೋಟ್, ಆಸ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮಿನ್ಸ್(ಉಪನಾಯಕ), ಕ್ಯಾಮರೋನ್ ಗ್ರೀನ್, ಜೋಶ್ ಹೇಜಲ್‌ವುಡ್, ಮೊಯಿಸ್ ಹೆನ್ರಿಕೇಸ್, ಮಾರ್ನಸ್​ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡ್‌ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್​, ಮಾರ್ಕಸ್ ಸ್ಟೋಯ್ನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.

Last Updated : Nov 29, 2020, 5:42 AM IST

ABOUT THE AUTHOR

...view details