ಸಿಡ್ನಿ: ಡಿಸೆಂಬರ್ 17ರಿಂದ ಅಡಿಲೇಡ್ನಲ್ಲಿ ಆರಂಭವಾಗಲಿರುವ ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಿಂದ ಆಸ್ಟ್ರೇಲಿಯಾ ತಂಡದ ಎಡಗೈ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊರಬಿದ್ದಿದ್ದಾರೆ. ವಾರ್ನರ್ 2ನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದರು.
4 ಪಂದ್ಯಗಳ ಟೆಸ್ಟ್ ಸರಣಿ ಡೇ ಆ್ಯಂಡ್ ನೈಟ್ ಪಂದ್ಯದ ಮೂಲಕ ಡಿಸೆಂಬರ್ 17ರಿಂದ ಆರಂಭಗೊಳ್ಳುತ್ತಿದೆ. ಆದರೆ ಕಳೆದ ಸಮ್ಮರ್ ಸೀಸನ್ನಲ್ಲಿ ಆಸ್ಟ್ರೇಲಿಯಾಕ್ಕೆ ಉತ್ತಮ ಆರಂಭ ನೀಡುವಲ್ಲಿ ಯಶಸ್ವಿಯಾಗಿದ್ದ ವಾರ್ನರ್ ಇಲ್ಲದೆ ಆಸ್ಟ್ರೇಲಿಯಾ ಬಹು ನಿರೀಕ್ಷಿತ ಸರಣಿ ಆಡಬೇಕಿದೆ. ಆದರೆ ದ್ವಿತೀಯ ಟೆಸ್ಟ್ ವೇಳೆ ತಂಡಕ್ಕೆ ಮರಳುವ ಸಾಧ್ಯತೆಯಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಹೇಳಿದೆ.
ಈ ಎಡಗೈ ಬ್ಯಾಟ್ಸ್‌ಮನ್ ಪ್ರಸ್ತುತ ಸಿಡ್ನಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಹೊರತುಪಡಿಸಿ ಇಂದು ಬಹುಪಾಲು ತಂಡ ಅಡಿಲೇಡ್ಗೆ ಪ್ರಯಾಣ ಬೆಳೆಸಲಿದೆ ಎಂದು ತಿಳಿದುಬಂದಿದೆ.