ಅಡಿಲೇಡ್ :ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಟೀಂ ಇಂಡಿಯಾ ನೀಡಿದ್ದ 90 ರನ್ಗಳ ಸುಲಭ ಗುರಿ ಬೆನ್ನತ್ತಿದ ಆಸೀಸ್ ತಂಡ ಉತ್ತಮವಾಗಿ ಬ್ಯಾಟ್ ಬೀಸಿತು. ಮೊದಲ ಇನ್ನಿಂಗ್ಸ್ನಲ್ಲಿ ಚುರುಕಾಗಿ ಬೌಲಿಂಗ್ ನಡೆಸಿದ್ದ ವೇಗಿಗಳು ಎರಡನೇ ಇನ್ನಿಂಗ್ಸ್ನಲ್ಲಿ ಕೊಂಚ ಮಂಕಾಗಿದ್ದರು.
ಆರಂಭಿಕ ಆಟಗಾರ ಮ್ಯಾಥ್ಯೂ ವೇಡ್(33) ರನ್ಔಟ್ಗೆ ಬಲಿಯಾದ್ರೆ, ಮಾರ್ನಸ್ ಲಾಬುಶೇನ್(6) ಅಶ್ವಿನ್ಗೆ ವಿಕೆಟ್ ಒಪ್ಪಿಸಿದ್ರು. ಅಂತಿಮವಾಗಿ ಆಸ್ಟ್ರೇಲಿಯಾ ತಂಡ 21 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 93 ರನ್ ಗಳಿಸುವ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿತು.