ಅಡಿಲೇಡ್:ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಹರ್ನಿಶಿ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ, ಆರಂಭಿಕ ಆಟಗಾರ ಪೃಥ್ವಿ ಶಾ ವಿಕೆಟ್ ಕಳೆದುಕೊಂಡು 62 ರನ್ಗಳ ಮುನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್ನಲ್ಲಿ ಕರಾರುವಕ್ಕಾದ ದಾಳಿ ನಡೆಸಿದ ಭಾರತೀಯ ಬೌಲರ್ಗಳು 191 ರನ್ಗಳಿಗೆ ಆಸ್ಟ್ರೇಲಿಯಾ ತಂಡವನ್ನು ಕಟ್ಟಿಹಾಕಿದ್ರು. ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಮೊದಲ ಇನ್ನಿಂಗ್ಸ್ನಲ್ಲಿ ಸೊನ್ನೆ ಸುತ್ತಿದ್ದ ಪೃಥ್ವಿ ಶಾ, ದ್ವಿತೀಯ ಇನ್ನಿಂಗ್ಸ್ನಲ್ಲಿ ಕಮ್ಮಿನ್ಸ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆಗಿ ನಿರಾಸೆ ಅನುಭವಿಸಿದ್ರು.