ಮೆಲ್ಬೋರ್ನ್ :ಬಾಕ್ಸಿಂಗ್ ಡೇ ಟೆಸ್ಟ್ನ ಎರಡನೇ ದಿನದ ಆರಂಭದಲ್ಲಿ ಟೀಂ ಇಂಡಿಯಾ ಆಘಾತ ಅನುಭವಿಸಿದ್ದು, ಪ್ರಮುಖ ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಮೊದಲ ದಿನದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 36 ರನ್ ಗಳಿಸಿದ್ದ ಭಾರತ ಎರಡನೇ ದಿನದ ಬ್ಯಾಟಿಂಗ್ ಆರಂಭಿಸಿದ್ದು, ಮತ್ತೆ ಎರಡು ವಿಕೆಟ್ ಕಳೆದುಕೊಂಡಿದೆ. ಆರಂಭದಿಂದಲೂ ಆಕ್ರಮಣಕಾರಿ ಬೌಲಿಂಗ್ ಪ್ರದರ್ಶಿಸಿದ ಆಸೀಸ್ ವೇಗಿಗಳು ಉತ್ತಮವಾಗಿ ಸ್ಪೆಲ್ ಮಾಡಿದ್ರು.
ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಗಿಲ್ ಇಂದು ಮತ್ತೊಮ್ಮೆ ಜೀವದಾನ ಪಡೆದ್ರೂ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ಎಡವಿದ್ರು. 65 ಎಸೆತಗಳಲ್ಲಿ 45 ರನ್ ಗಳಿಸಿದ ಗಿಲ್, ಕಮ್ಮಿನ್ಸ್ ಎಸೆತದಲ್ಲಿ ಪೇನ್ಗೆ ಕ್ಯಾಚ್ ನೀಡಿ ನಿರ್ಗಮಿಸಿದ್ರು.
ಇತ್ತ ಭರವಸೆಯ ಆಟಗಾರ ಚೇತೇಶ್ವರ್ ಪೂಜಾರ ದ್ವಿತೀಯ ಟೆಸ್ಟ್ನಲ್ಲೂ ಬಿಗ್ ಸ್ಕೋರ್ ಕಲೆ ಹಾಕುವಲ್ಲಿ ವಿಫಲರಾಗಿದ್ದು, ಕೇವಲ 17 ರನ್ಗಳಿಸಿ ಕಮ್ಮಿನ್ಸ್ಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡ್ರು. ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು 70 ರನ್ ಗಳಿಸಿದ್ದು, ನಾಯಕ ಅಜಿಂಕ್ಯಾ ರಹಾನೆ ಮತ್ತು ಹನುಮ ವಿಹಾರಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.
ನಿನ್ನೆ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಆಸೀಸ್ ವಿರುದ್ಧ ಸಾಲಿಡ್ ಪ್ರದರ್ಶನ ತೋರಿದ ಟೀಂ ಇಂಡಿಯಾ ಬೌಲರ್ಗಳು ಮೊದಲ ಇನ್ನಿಂಗ್ಸ್ನಲ್ಲಿ 195 ರನ್ಗಳಿಗೆ ಕಾಂಗರೂಗಳನ್ನು ಕಟ್ಟಿಹಾಕಿದ್ರು.