ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಕುತೂಹಲ ಘಟ್ಟಕ್ಕೆ ತಲುಪಿದ್ದು, ನಾಲ್ಕನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡು 98 ರನ್ ಗಳಿಸಿದೆ.
ಆಸ್ಟ್ರೇಲಿಯಾ ದ್ವಿತೀಯ ಇನ್ನಿಂಗ್ಸ್ನಲ್ಲಿ 312 ರನ್ಗಳಿಸಿ ಡಿಕ್ಲೇರ್ ಮಾಡಿದ ನಂತರ ಗೆಲ್ಲಲು 407 ರನ್ಗಳ ಕಠಿಣ ಗುರಿ ಪಡೆದ ಭಾರತ ತಂಡಕ್ಕೆ ರೋಹಿತ್ ಶರ್ಮಾ ಮತ್ತು ಶುಬ್ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು. ಈ ಇಬ್ಬರು ಆಟಗಾರರು ಮೊದಲ ವಿಕೆಟ್ಗೆ 71 ರನ್ಗಳ ಜೊತೆಯಾಟವಾಡಿದರು. ಕಳೆದ ಇನ್ನಿಂಗ್ಸ್ನಲ್ಲಿ ಅರ್ಧಶತಕ ಸಿಡಿಸಿ ಭರವಸೆ ಮೂಡಿಸಿದ್ದ ಶುಬ್ಮನ್ ಗಿಲ್ 31 ರನ್ ಗಳಿಸಿ ಹೆಜಲ್ವುಡ್ಗೆ ವಿಕೆಟ್ ಒಪ್ಪಿಸಿದರು.