ಹೈದರಾಬಾದ್ :ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹೈದರಾಬಾದ್ ಕ್ರಿಕೆಟ್ ಸಂಸ್ಥೆ(ಹೆಚ್‌ಸಿಎ)ಯ ಅಧ್ಯಕ್ಷ ಮೊಹಮ್ಮದ್ ಅಜರುದ್ದೀನ್ ಹೆಚ್‌ಸಿಎ ಸದಸ್ಯರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೆಚ್‌ಸಿಎ ಸದಸ್ಯರು ತಮ್ಮನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಯೂಸೆಫ್ ಎಂಬುವರಿಗೆ ವೇತನ ಹೆಚ್ಚಳ, ಬೋನಸ್ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ ಎಂದು ಅಲ್ಲಿನ ಪೊಲೀಸ್ ಇನ್ಸ್‌ಪೆಕ್ಟರ್ ರಂಗಸ್ವಾಮಿ ಮಾಹಿತಿ ನೀಡಿದ್ದಾರೆ. ಹೈದರಾಬಾದ್ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಮತ್ತು ಖಜಾಂಚಿ ಸುರೇಂದ್ರ ಅಗರ್ವಾಲ್‌ಗೆ ಮಾಹಿತಿ ನೀಡದೆ ಅಧ್ಯಕ್ಷ ಅಜರುದ್ದೀನ್ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದರಂತೆ.