ಢಾಕಾ: ಮೂರು ಏಕದಿನ ಕ್ರಿಕೆಟ್ ಪಂದ್ಯಗಳ ಸರಣಿಯಲ್ಲಿ ಬಾಂಗ್ಲಾ ಪಾರಮ್ಯ ಮೆರೆದಿದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಸರಣಿ ಕೈವಶ ಮಾಡಿಕೊಂಡಿದೆ.
ಎರಡನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ಮಿಂಚಿದ ಬಾಂಗ್ಲಾದೇಶ ವೆಸ್ಟ್ ಇಂಡೀಸ್ ತಂಡದ ಮೇಲೆ ಸವಾರಿ ನಡೆಸಿತು. ಇಲ್ಲಿನ ಶೇರ್ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 43.3 ಓವರ್ಗಳಲ್ಲಿ ತನ್ನೆಲ್ಲ ವಿಕೆಟ್ ಕಳೆದುಕೊಂಡು ಕೇವಲ 148ರನ್ಗಳಿಕೆ ಮಾಡಿತು. ತಂಡದ ಪರ ರೋವ್ಮನ್ ಪೊವೆಲ್ 44ರನ್ಗಳಿಸಿ ಅತ್ಯಧಿಕ ಸ್ಕೋರ್ರ ಎನಿಸಿಕೊಂಡರು.