ಕರ್ನಾಟಕ

karnataka

ETV Bharat / sports

ಅಭಿನಂದನೆಗಳು ಹಿಟ್​ಮ್ಯಾನ್​...! ರೋಹಿತ್​ ಬೆನ್ನುತಟ್ಟಿದ ಬಿಸಿಸಿಐ - 2020 ರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ

ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಹಿಟ್​ಮ್ಯಾನ್​ ರೋಹಿತ್​ ಶರ್ಮಾಗೆ ಬಿಸಿಸಿಐ ಅಭಿನಂದಿಸಿದೆ.

rohit
ರೋಹಿತ್​

By

Published : Aug 22, 2020, 10:24 AM IST

ಮುಂಬೈ:ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆದ ಹಿಟ್​ಮ್ಯಾನ್​ ರೋಹಿತ್​ ಶರ್ಮಾಗೆ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟ್ವಿಟರ್​ನಲ್ಲಿ ಅಭಿನಂದಿಸಿದೆ.

"ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ 2020ರ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ನಿಮಗೆ ಧನ್ಯವಾದಗಳು. ಈ ಪ್ರಶಸ್ತಿಯನ್ನು ಪಡೆದ ನಾಲ್ಕನೇ ಭಾರತೀಯ ಕ್ರಿಕೆಟಿಗ ನೀವು. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ, ಹಿಟ್​ಮ್ಯಾನ್​!" ಎಂದು ಟ್ವಿಟರ್​​ನಲ್ಲಿ ಬರೆದು ಕೊಂಡಿದೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪಡೆಯುತ್ತಿರುವವರು

ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಇತರ ಮೂವರು ಕ್ರಿಕೆಟಿಗರು ಸಚಿನ್ ತೆಂಡೂಲ್ಕರ್, ಎಂ.ಎಸ್.ಧೋನಿ ಮತ್ತು ವಿರಾಟ್ ಕೊಹ್ಲಿ.

ಭಾರತದ ಕ್ರಿಕೆಟ್ ಆಡಳಿತ ಮಂಡಳಿ, ವೇಗಿ ಇಶಾಂತ್ ಶರ್ಮಾ ಮತ್ತು ಮಹಿಳಾ ತಂಡದ ದೀಪ್ತಿ ಶರ್ಮಾ ಅವರನ್ನೂ ಕೂಡಾ ಅಭಿನಂದಿಸಿದ್ದು, ಎರಡೂ ಆಟಗಾರರು ಈ ವರ್ಷದ ಅರ್ಜುನ ಪ್ರಶಸ್ತಿ ಪಡೆಯಲಿದ್ದಾರೆ.

ABOUT THE AUTHOR

...view details