ಮುಂಬೈ: ಮುಂದಿನ ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಗಮನದಲ್ಲಿಟ್ಟುಕೊಂಡು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಗಾಗಿ 15 ಸದಸ್ಯರನ್ನೊಳಗೊಂಡ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಪ್ರಕಟಗೊಂಡಿದೆ.
ವಿಂಡೀಸ್ ಕ್ರಿಕೆಟ್ ಸರಣಿಯಿಂದ ಹೊರಗುಳಿದಿದ್ದ ಅನುಭವಿ ಧೋನಿ ದಕ್ಷಿಣ ಆಫ್ರಿಕಾ ಸರಣಿ ವೇಳೆಗೆ ತಂಡಕ್ಕೆ ಸೇರ್ಪಡೆಗೊಳ್ಳುತ್ತಾರೆಂದು ಭಾವಿಸಲಾಗಿತ್ತು. ಆದರೆ, ಆಯ್ಕೆ ಸಮಿತಿ ಹರಿಣಗಳ ವಿರುದ್ಧದ ಟಿ-20 ಸರಣಿಗಾಗಿ ಅವರನ್ನ ಕೈಬಿಟ್ಟಿದ್ದು, ಯುವ ಪ್ರತಿಭೆಗಳಿಗೆ ಮಣೆ ಹಾಕಿದೆ. ಪ್ರಮುಖವಾಗಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಇಲ್ಲೂ ಚಾನ್ಸ್ ಪಡೆದುಕೊಂಡಿರುವುದು ಗಮನಾರ್ಹ ಸಂಗತಿ.
ತಂಡ ಇಂತಿದೆ:ವಿರಾಟ್ ಕೊಹ್ಲಿ(ಕ್ಯಾಪ್ಟನ್), ರೋಹಿತ್ ಶರ್ಮಾ(ಉಪನಾಯಕ), ಕೆ.ಎಲ್.ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ರಿಷಭ್ ಪಂತ್(ವಿ,ಕೀ), ಹಾರ್ದಿಕ್ ಪಾಂಡ್ಯಾ, ರವೀಂದ್ರ ಜಡೇಜಾ, ಕೃನಾಲ್ ಪಾಂಡ್ಯಾ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ಖಲೀಲ್ ಅಹ್ಮದ್, ದೀಪಕ್ ಚಹರ್, ನವದೀಪ್ ಸೈನಿ.