ಕೋಲ್ಕತ್ತಾ: ಸಹೋದರನಿಗೆ ಕೋವಿಡ್ 19 ಪಾಸಿಟಿವ್ ವರದಿ ಬಂದ ಮೇಲೆ ಒಂದುವಾರ ಕ್ವಾರಂಟೈನ್ನಲ್ಲಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೋವಿಡ್ ಟೆಸ್ಟ್ನಲ್ಲಿ ನೆಗೆಟಿವ್ ವರದಿ ಬಂದಿದೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಕೋವಿಡ್ 19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ
ಸೌರವ್ ಗಂಗುಲಿ ಅವರ ಸಹೋದರ ಸ್ನೇಹಶೀಶ್ ಗಂಗೂಲಿಗೆ ವಾರದ ಹಿಂದೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಈ ಕಾರಣದಿಂದ ಗಂಗೂಲಿ ಕಳೆದ ಒಂದು ವಾರದಿಂದ ತಮ್ಮ ಮನೆಯಲ್ಲಿ ಹೋಂ ಕ್ವಾರಂಟೈನ್ ಆಗಿದ್ದರು. ಇದೀಗ ಕೊರೊನಾ ವೈರಸ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ಗಂಗೂಲಿ ತಮ್ಮ ತಾಯಿ ಹಾಗೂ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ. ಸಹೋದರನಿಗೆ ಪಾಸಿಟಿವ್ ಬಂದಿದ್ದರಿಂದ ಅವರೂ ಕೂಡ ಮುನ್ನೆಚ್ಚರಿಕಾ ಕ್ರಮವಾಗಿ ಸ್ವಯಂ ಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ಸದ್ಯ ಅವರ ವರದಿಯಲ್ಲಿ ನೆಗೆಟಿವ್ ವರದಿ ಬಂದಿದೆ. ಅವರ ಸಹೋದರ ಹಾಗೂ ಬಂಗಾಳ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಸ್ನೇಹಶೀಶ್ ಗಂಗೂಲಿ ಕೂಡ ಸೋಂಕಿನಿಂದ ಚೇತರಿಸಿಕೊಂಡಿದ್ದು, ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.