ನವದೆಹಲಿ: ಕೊರೊನಾ ವೈರಸ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಿರುವ ಪರಿಣಾಮ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯನ್ನು ರದ್ದು ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕೊರೊನಾ ಭೀತಿಯಿಂದಾಗಿ ಪ್ರೇಕ್ಷಕರಿಲ್ಲೇದೆ ದ್ವಿತೀಯ ಮತ್ತು ತೃತೀಯ ಏಕದಿನ ಪಂದ್ಯಗಳನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸೋಂಕಿನ ಭೀತಿಯಿಂದಾಗಿ ಸರಣಿಯನ್ನು ರದ್ದುಮಾಡಲು ಬಿಸಿಸಿಐ ನಿರ್ಧರಿಸಿದೆ.
ಕೊರೊನಾ ಸೋಂಕಿನ ಭೀತಿಯಿಂದ ಈಗಾಗಲೇ ಐಪಿಎಲ್ ಟೂರ್ನಿಯನ್ನು ಮುಂದೂಡಿರುವ ಬಿಸಿಸಿಐ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯನ್ನು ರದ್ದುಮಾಡಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಮೊದಲ ಪಂದ್ಯ ಮಳೆ ಕಾರಣದಿಂದ ರದ್ದಾಗಿತ್ತು. ದ್ವಿತೀಯ ಪಂದ್ಯ ಮಾರ್ಚ್ 15ರಂದು ಲಖನೌ ಹಾಗೂ ಕೊನೆಯ ಏಕದಿನ ಪಂದ್ಯ ಮಾರ್ಚ್ 18ರಂದು ಕೋಲ್ಕತ್ತಾದಲ್ಲಿ ನಡೆಯಬೇಕಿತ್ತು.
ಬಿಸಿಸಿಐ ಮತ್ತು ದಕ್ಷಿಣ ಆಫ್ರಿಕಾ ಕ್ರಿಕೆಟ್ ಬೋರ್ಡ್ ಈ ಬಗ್ಗೆ ಮಾತುಕತೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜಿಸಲು ತೀರ್ಮಾನಿಸಿವೆ.