ನವದೆಹಲಿ:ಲಂಡನ್ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುವ ಮೂಲಕ ಅಭಿಯಾನ ಮುಗಿಸಿದೆ. ಇದೀಗ ಬಿಸಿಸಿಐ, ತಂಡದ ಜತೆಗೆ ಮುಖ್ಯ ಕೋಚ್, ಸಹಾಯಕ ಕೋಚ್ಗಳ ಹುದ್ದೆಗಳಲ್ಲಿ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ.
ತಂಡದ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಅವರ ಅವಧಿ ಮುಕ್ತಾಯಗೊಂಡಿದ್ದು, ವಿಶ್ವಕಪ್ ದೃಷ್ಠಿಯಿಂದ 45 ದಿನಗಳ ಕಾಲ ಹುದ್ದೆಯ ಅವಧಿ ವಿಸ್ತರಣೆ ಮಾಡಲಾಗಿತ್ತು. ಅದು ಮುಕ್ತಾಯಗೊಳ್ಳಲು ಕೆಲ ದಿನಗಳು ಮಾತ್ರ ಬಾಕಿ ಇರುವ ಕಾರಣ ಬಿಸಿಸಿಐ ವಿವಿಧ ಹುದ್ದೆಗಳಿಗೆ ಹೊಸದಾಗಿ ಅರ್ಜಿ ಆಹ್ವಾನ ಮಾಡಲು ಮುಂದಾಗಿದೆ.
ಆಗಸ್ಟ್ 3ರಿಂದ ಸೆಪ್ಟೆಂಬರ್ 3ರವರೆಗೆ ವೆಸ್ಟ್ ಇಂಡೀಸ್ ಟೂರ್ ಮಾಡಲಿರುವ ಟೀಂ ಇಂಡಿಯಾ, ತದನಂತರ ಸೆಪ್ಟೆಂಬರ್ 15ರಿಂದ ಭಾರತದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ ನಡೆಸಲಿದೆ. ಈ ವೇಳೆಗೆ ತಂಡದ ಕೋಚ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ ಹುದ್ದೆಗಾಗಿ ಅರ್ಜಿ ಆಹ್ವಾನ ಮಾಡಲು ಬಿಸಿಸಿಐ ನಿರ್ಧರಿಸಿದೆ. ಇನ್ನು ರವಿಶಾಸ್ತ್ರಿ, ಭರತ್ ಅರುಣ್, ಸಂಜಯ್ ಬಂಗಾರ್ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಬೇಕಾಗಿದೆ. ಟೀಂ ಮ್ಯಾನೇಜರ್ ಹಾಗೂ ಫಿಸಿಯೋ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನ ಮಾಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
2017ರಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರವಿಶಾಸ್ತ್ರಿ ಆಯ್ಕೆಯಾಗಿದ್ದು, ಅವರ ನೇತೃತ್ವದಲ್ಲಿ ತಂಡ ಯಾವುದೇ ಐಸಿಸಿ ಟ್ರೋಫಿ ಗೆದ್ದಿಲ್ಲ. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ಮಾತ್ರ ತಂಡ ಯಶಸ್ವಿಯಾಗಿದೆ.