ಮೆಲ್ಬರ್ನ್: ಆಸ್ಟ್ರೇಲಿಯಾ ತಂಡದ ಮಾಜಿ ಉಪ ನಾಯಕ ಡೇವಿಡ್ ವಾರ್ನರ್ ಮತ್ತು ಬಲಗೈ ವೇಗಿ ಸೀನ್ ಅಬ್ಬಾಟ್ ಭಾರತದ ಎದುರಿನ ಬಾಕ್ಸಿಂಗ್ ಡೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ. ಇಬ್ಬರೂ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಪಂದ್ಯಕ್ಕೆ ಲಭ್ಯವಿರುವುದಿಲ್ಲ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ತಿಳಿಸಿದೆ.
ಆದರೆ ಈ ಇಬ್ಬರೂ ಆಟಗಾರರೂ 3ನೇ ಟೆಸ್ಟ್ ಪಂದ್ಯಕ್ಕೆ ತಂಡ ಸೇರುವ ನಿರೀಕ್ಷೆ ಇದೆ.
ಇದನ್ನೂ ಓದಿ:ಆಸ್ಟ್ರೇಲಿಯಾ ವಿರುದ್ಧ 2ನೇ ಟೆಸ್ಟ್‌ಗೆ ಬಲಿಷ್ಠ ತಂಡ ಪ್ರಕಟಿಸಿದ ಗೌತಮ್ ಗಂಭೀರ್
ಮೂಲಗಳ ಪ್ರಕಾರ, ಗಾಯದಿಂದ ವಾರ್ನರ್ ಚೇತರಿಕೆ ಹಾದಿಯಲ್ಲಿದ್ದಾರೆ. ಭಾರತದ ವಿರುದ್ಧದ ಎರಡನೇ ಏಕದಿನ ಪಂದ್ಯದ ವೇಳೆ ತೊಡೆ ಸಂದಿನ ಗಾಯಕ್ಕೆ ತುತ್ತಾಗಿದ್ದರು. ಅದೇ ರೀತಿ ಭಾರತದೆದುರಿನ ವಾರ್ಮ್ ಅಪ್ ಮ್ಯಾಚ್ ವೇಳೆ ಗಾಯಗೊಂಡಿದ್ದ ಸೀನ್ ಅಬ್ಬಾಟ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆದರೂ ಅವರು ಬಾಕ್ಸಿಂಗ್ ಡೇ ಟೆಸ್ಟ್‌ಗೆ ತಂಡ ಸೇರುವುದಿಲ್ಲ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾಕ್ಸಿಂಗ್ ಡೇ ಟೆಸ್ಟ್ ಡಿಸೆಂಬರ್ 26 ರಂದು ಮೆಲ್ಬರ್ನ್‌ನಲ್ಲಿ ನಡೆಯಲಿದೆ.