ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ದಶಕದ ಟೆಸ್ಟ್ ತಂಡವನ್ನು ಪ್ರಕಟಿಸಿದ ಬೆನ್ನಲ್ಲೇ ಆಸೀಸ್ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ತಮ್ಮ ನೆಚ್ಚಿನ ದಶಕದ ಟೆಸ್ಟ್ ತಂಡವನ್ನು ಘೋಷಿಸಿದ್ದಾರೆ. ಈ ತಂಡಕ್ಕೆ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ನಾಯಕನಾಗಿದ್ದಾರೆ.
ಆಶ್ಚರ್ಯವೆಂದರೆ ಈ ತಂಡಕ್ಕೆ ವಿರಾಟ್ ಕೊಹ್ಲಿ ಮಾತ್ರ ಭಾರತೀಯ ಆಟಗಾರನಾಗಿ ಹಾಗ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಇಂಗ್ಲೆಂಡ್, ಆಸ್ಟ್ರೇಲಿಯಾದ 3, ದಕ್ಷಿಣ ಆಫ್ರಿಕಾದ 3, ನ್ಯೂಜಿಲ್ಯಾಂಡ್ ಮತ್ತು ಪಾಕಿಸ್ತಾನ ತಂಡದ ತಲಾ ಒಬ್ಬ ಅಟಗಾರನನ್ನು ಆಯ್ಕೆ ಮಾಡಿದ್ದಾರೆ.
ಇಂಗ್ಲೆಂಡ್ನ ಆಲಸ್ಟೇರ್ ಕುಕ್ ಮತ್ತು ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಆರಂಭಿಕರನ್ನಾಗಿ ಆಯ್ಕೆ ಮಾಡಿದ್ದಾರೆ. ಅದೇ ರೀತಿ 3ನೇ ಕ್ರಮಾಂಕಕ್ಕೆ ನ್ಯೂಜಿಲ್ಯಾಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್, 4 ಮತ್ತು 5 ರಲ್ಲಿ ಭಾರತದ ವಿರಾಟ್ ಕೊಹ್ಲಿ ಮತ್ತು ಸ್ಟಿವ್ ಸ್ಮಿತ್ರನ್ನು ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕವನ್ನು ಬಲಿಷ್ಠವಾಗಿರಿಸಲು ಇವರಿಬ್ಬರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ.