ಶಾರ್ಜಾ: ಸನ್ರೈಸರ್ಸ್ ಹೈದರಾಬಾದ್ ತಂಡ ಮಂಗಳವಾರ ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸುವ ಸಾಕಷ್ಟು ತಾಕತ್ತನ್ನು ಹೊಂದಿದ್ದು, ಪ್ಲೇ ಆಫ್ ಪ್ರವೇಶಿಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
13ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯದಲ್ಲಿ ಹೈದರಾಬಾದ್ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ವಾರ್ನರ್ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆದ್ದರೆ ಪ್ಲೇ ಆಫ್ ಪ್ರವೇಶಿಸಲಿದೆ. ಸೋತರೆ ಕೆಕೆಆರ್ ತಂಡ ಪ್ಲೇ ಆಫ್ ಪ್ರವೇಶಿಸಲಿದೆ.
ಇತ್ತೀಚಿನ ಪಂದ್ಯಗಳಲ್ಲಿ ಒಳ್ಳೆಯ ಆಟವನ್ನು ಆಡುವ ಮೂಲಕ ಅವರು (ಎಸ್ಆರ್ಹೆಚ್) ತಾವಾಗಿಯೇ ಈ ಹಂತಕ್ಕೆ ತಲುಪಿದ್ದಾರೆ. ಹಾಗಾಗಿ ಅವರು ಈ ಸವಾಲಿಗೆ ಸಿದ್ಧರಾಗಿರುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ ಎಂದು ಲಾರಾ ಹೇಳಿದ್ದಾರೆ.
ಮುಂಬೈ ಇಂಡಿಯನ್ಸ್ ಈಗಾಗಲೆ ನಂಬರ್ ಒನ್ ತಂಡವಾಗಿ ಪ್ಲೇ ಆಫ್ನಲ್ಲಿ ಭದ್ರವಾಗಿ ನೆಲೆಯೂರಿದೆ. ಕ್ವಾಲಿಫೈಯರ್ 1ರಲ್ಲಿ ಅದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಅವರು ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದ್ದು, ಬೆಂಚ್ ಕಾದಿರುವ ಕೆಲವು ಆಟಗಾರರಿಗೆ ಅವಕಾಶ ನೀಡುವ ಸಾಧ್ಯತೆಯಿದೆ.
" ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪಂದ್ಯಗಳಿಗೆ ಸಿದ್ಧರಾಗಬೇಕಿರುವ ದೃಷ್ಟಿಯಿಂದ ಕೆಲವು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಿದೆ. ಇದು ಎಸ್ಆರ್ಹೆಚ್ಗೆ ಅನುಕೂಲವಾಗಬಹುದು ಎಂದು ನಾನು ಭಾವಿಸಿದ್ದೇನೆ. ನನ್ನ ಪ್ರಕಾರ ಹೈದರಾಬಾದ್ ಈ ಕ್ವಾರ್ಟರ್ ಫೈನಲ್ ಪಂದ್ಯವನ್ನು ಗೆಲ್ಲುವುದಕ್ಕೆ ಹೈದರಾಬಾದ್ ತಂಡ ಎಲ್ಲಾ ತಯಾರಿಯನ್ನ ಪಡೆದುಕೊಂಡಿದೆ ಎಂದು ನಾನು ಭಾವಿಸುತ್ತೇನೆ" ಎಂದು ಲಾರಾ ಹೇಳಿದ್ದಾರೆ.
ಇಂದು ನಡೆಯುವ ಪಂದ್ಯದಲ್ಲಿ ಹೈದರಾಬಾದ್ ತಂಡ ಗೆದ್ದರೆ, ಪ್ಲೇ ಆಫ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲಂಜರ್ಸ್ ಬೆಂಗಳೂರು ತಂಡದ ಸವಾಲನ್ನು ಎದುರಿಸಲಿದೆ.