ಗಬ್ಬಾ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಿಂದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹಾಗೂ ಆರ್.ಅಶ್ವಿನ್ ಗಾಯಗೊಂಡು ಹೊರಬಿದ್ದಿದ್ದು, ಇದೀಗ ಚೇತರಿಸಿಕೊಂಡಿರುವ ಅವರು ನೆಟ್ನಲ್ಲಿ ಅಭ್ಯಾಸ ಶುರು ಮಾಡಿದ್ದಾರೆ.
ನೆಟ್ನಲ್ಲಿ ಅಶ್ವಿನ್ ಹಾಗೂ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಮಾಡುತ್ತಿರುವ ವಿಡಿಯೋ ತುಣುಕವೊಂದನ್ನ ಬಿಸಿಸಿಐ ತನ್ನ ಟ್ವಿಟರ್ ಅಕೌಂಟ್ನಲ್ಲಿ ಶೇರ್ ಮಾಡಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯದ ವೇಳೆ ಟೀಂ ಇಂಡಿಯಾ ತಂಡವನ್ನ ಸೋಲಿನ ದವಡೆಯಿಂದ ಪಾರು ಮಾಡುವಲ್ಲಿ ಅಶ್ವಿನ್ ಮಹತ್ವದ ಪಾತ್ರ ನಿರ್ವಹಿಸಿದ್ದರು.