ದುಬೈ:ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದಿರುವ ಬುಮ್ರಾ ಆವೃತ್ತಿಯೊಂದರಲ್ಲಿ ಗರಿಷ್ಠ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.
ಭುವನೇಶ್ವರ್ ಕುಮಾರ್ ಹೆಸರಿನಲ್ಲಿದ್ದ ದಾಖಲೆ ಬ್ರೇಕ್ ಮಾಡಿದ ಜಸ್ಪ್ರೀತ್ ಬುಮ್ರಾ
13ನೇ ಆವೃತ್ತಿಯಲ್ಲಿ ಮೊದಲ ಕ್ವಾಲಿಫೈಯರ್ನಲ್ಲಿ ಡೆಲ್ಲಿ ಬ್ಯಾಟ್ಸ್ಮನ್ಗಳ ಬ್ಯಾಟಿಂಗ್ ಲೈನ್ಅಪ್ ಪುಡಿಗಟ್ಟಿರುವ ಬುಮ್ರಾ ಕೇವಲ 14 ರನ್ ನೀಡಿ 4 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ಈ ಆವೃತ್ತಿಯಲ್ಲಿ 27 ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ಪಡೆದುಕೊಂಡಿದ್ದಲ್ಲದೆ, ಸ್ವಿಂಗ್ ಕಿಂಗ್ ಭುವನೇಶ್ವರ್ ಕುಮಾರ್ ದಾಖಲೆ ಬ್ರೇಕ್ ಮಾಡಿದ್ದಾರೆ.

ಸನ್ರೈಸರ್ಸ್ ಹೈದರಾಬಾದ್ ತಂಡದ ಭುವನೇಶ್ವರ್ ಕುಮಾರ್ 2017ರ ಐಪಿಎಲ್ನಲ್ಲಿ 26 ವಿಕೆಟ್ ಪಡೆದಿದ್ದರು. ಇದೀಗ ಇನ್ನು ಫೈನಲ್ ಪಂದ್ಯ ಬಾಕಿ ಉಳಿದಿರುವಂತೆಯೇ ಬುಮ್ರಾ 27 ವಿಕೆಟ್ ಪಡೆದು ದಾಖಲೆ ಬರೆದಿದ್ದಾರೆ. ಒಟ್ಟಾರೆ ಐಪಿಎಲ್ ಆವೃತ್ತಿಯಲ್ಲಿ ಹೆಚ್ಚು ವಿಕೆಟ್ ವಿಕೆಟ್ ಪಡೆದಿರುವ ದಾಖಲೆ ಚೆನ್ನೈ ಸೂಪರ್ ಕಿಂಗ್ಸ್ನ ಡ್ವೇನ್ ಬ್ರಾವೋ(32) ಹೆಸರಿನಲ್ಲಿದೆ.