ಮುಂಬೈ:ಭಾರತೀಯ ಕ್ರಿಕೆಟ್ ನಿಯಂತ್ರಣ ಸಂಸ್ಥೆ(ಬಿಸಿಸಿಐ) ಕೊಡಮಾಡುವ 'ಅತ್ಯುತ್ತಮ ಅಂತರಾಷ್ಟ್ರೀಯ ಕ್ರಿಕೆಟಿಗ' ಪಾಲಿ ಉಮ್ರಿಗರ್ ಪ್ರಶಸ್ತಿಗೆ ವೇಗಿ ಜಸ್ಪ್ರಿತ್ ಬುಮ್ರಾ ಆಯ್ಕೆಯಾಗಿದ್ದಾರೆ.
2018 ಮತ್ತು 2019ನೇ ಸಾಲಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಕ್ಕಾಗಿ ಬುಮ್ರಾಗೆ ಈ ಪ್ರಶಸ್ತಿ ಒಲಿದಿದೆ.
ಮಹಿಳಾ ಕ್ರಿಕೆಟರ್ ವಿಭಾಗದಲ್ಲಿ ಪೂನಮ್ ಯಾದವ್ 'ಅತ್ಯುತ್ತಮ ಅಂತರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ'ಯನ್ನು ಸ್ವೀಕರಿಸಲಿದ್ದಾರೆ.
2018ರಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಬುಮ್ರಾ ಹಿಂತಿರುಗಿ ನೋಡಲೇ ಇಲ್ಲ. ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ವಿರುದ್ಧ 5 ವಿಕೆಟ್ ಗುಚ್ಚ ಪಡೆದುಕೊಂಡಿದ್ದು, ಈ ಸಾಧನೆ ಮಾಡಿದ ಏಷ್ಯಾದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ಇಂದು ಮುಂಬೈನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಬುಮ್ರಾ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇದೇ ವೇಳೆ ಬಿಸಿಸಿಐ ಈ ಹಿಂದೆ ಘೋಷಣೆ ಮಾಡಿದ್ದಂತೆ ಕೃಷ್ಣಮಾಚಾರಿ ಶ್ರೀಕಾಂತ್ ಹಾಗೂ ಭಾರತ ಮಹಿಳಾ ತಂಡದ ಮಾಜಿ ನಾಯಕಿ ಅಂಜುಮ್ ಚೋಪ್ರಾ ಸಿ.ಕೆ.ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಸ್ವೀಕರಿಸಲಿದ್ದಾರೆ.