ಕಟಕ್(ಒಡಿಶಾ):ವೆಸ್ಟ್ ಇಂಡೀಸ್ ನಡುವಿನ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ಜಯಿಸಿದ ಟೀಂ ಇಂಡಿಯಾ ಸರಣಿ ಗೆಲುವಿನ ಮೂಲಕ 2019ಕ್ಕೆ ವಿದಾಯ ಹೇಳಿದೆ. ಈ ಪಂದ್ಯದಲ್ಲಿ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ.
ಒಡಿಶಾದ ಕಟಕ್ನಲ್ಲಿ ಭಾನುಚವಾರ ನಡೆದಿದ್ದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಗೆಲುವಿನ ಪ್ರಮುಖ ಪಾತ್ರ ವಹಿಸಿದ ನಾಯಕ ವಿರಾಟ್ ಕೊಹ್ಲಿ 85 ರನ್ ಗಳಿಸಿದ್ದರು. ಈ ಮೂಲಕ ಕೊಹ್ಲಿ ಏಕದಿನ ಕ್ರಿಕೆಟ್ ರನ್ ಗಳಿಕೆಯಲ್ಲಿ ದಕ್ಷಿಣ ಆಫ್ರಿಕಾ ಮಾಜಿ ಆಟಗಾರ, ದಿಗ್ಗಜ ಆಲ್ರೌಂಡರ್ ಜಾಕ್ ಕಾಲೀಸ್ ಅವರನ್ನು ಹಿಂದಿಕ್ಕಿದರು. ಕಾಲೀಸ್ 328 ಪಂದ್ಯಗಳಲ್ಲಿ 11,579 ರನ್ ಬಾರಿಸಿ, ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರು. ಇದೀಗ ನಿನ್ನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ಕೊಹ್ಲಿ ಕಾಲೀಸ್ರನ್ನು ಹಿಂದಿಕ್ಕಿದ್ದು, ಒಟ್ಟಾರೆ 11,609 ರನ್ ಬಾರಿದ್ದಾರೆ. ಕೊಹ್ಲಿ ಕೇವಲ 242ನೇ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ.