ಬೆಂಗಳೂರು: ಮುಂಬೈ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ 50 ವಿಕೆಟುಗಳ ಸಾಧನೆ ಮಾಡಿದ್ದಾರೆ.
ಚಿನ್ನಸ್ವಾಮಿಯಲ್ಲಿ 50 ವಿಕೆಟ್ ಪೂರ್ಣಗೊಳಿಸಿದ ಚಹಲ್ - ಐಪಿಎಲ್
ಇಂಡಿಯನ್ ಪ್ರಿಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಚಹಲ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ವಿಕೆಟ್ ಪಡೆಯುವ ಮೂಲಕ ಚಿನ್ನಸ್ವಾಮಿಯಲ್ಲಿ 50 ವಿಕೆಟ್ ಪಡೆದ ಸಾಧನೆ ಮಾಡಿದರು.
ಇಂಡಿಯನ್ ಪ್ರಿಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸುತ್ತಿರುವ ಚಹಲ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ವಿಕೆಟ್ ಪಡೆಯುವ ಮೂಲಕ ಚಿನ್ನಸ್ವಾಮಿಯಲ್ಲಿ 50 ವಿಕೆಟ್ ಪಡೆದ ಸಾಧನೆ ಮಾಡಿದರು.
ಈ ಪಂದ್ಯದಲ್ಲಿ ಚಹಲ್ 38 ರನ್ ನೀಡಿ 4 ವಿಕೆಟ್ ಪಡೆದು ಮುಂಬೈ ರನ್ ವೇಗಕ್ಕೆ ಕಡಿವಾಣ ಹಾಕಿದರು. ಬ್ಯಾಟಿಂಗ್ ಸ್ನೇಹಿ ಪಿಚ್ ಆದ ಈ ಕ್ರೀಡಾಂಗಣದಲ್ಲಿ ಬೌಂಡರಿ ಸಿಕ್ಸರ್ಗಳ ಸಂಖ್ಯೆಯೇ ಹೆಚ್ಚಿರುತ್ತದೆ. ಹೀಗಿದ್ದರು ಚಹಲ್ ಮುಂಬೈ ತಂಡದ ಪ್ರಮುಖ 4 ವಿಕೆಟ್ ಪಡೆಯುವುದರ ಜೊತೆಗೆ ಈ ಚಿಕ್ಕ ಗ್ರೌಂಡ್ನಲ್ಲಿ 50+ ವಿಕೆಟ್ ಪಡೆದಿರುವುದು ನಿಜಕ್ಕೂ ಶ್ಲಾಘನೀಯ