ಹೈದರಾಬಾದ್: ನಾಳೆಯಿಂದ ಆರಂಭವಾಗಲಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ-20 ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್ಗೆ ಸುವರ್ಣ ಅವಕಾಶವೊಂದು ಒದಗಿಬರುವ ಸಾಧ್ಯತೆ ಇದೆ.
ವಿಂಡೀಸ್ ವಿರುದ್ಧದ ಚುಟುಕು ಸರಣಿಯಲ್ಲಿ ಕನ್ನಡಿಗ ಕೆ.ಎಲ್.ರಾಹುಲ್, ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಬಿದ್ದಿದ್ದು, ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಶಿಖರ್ ಧವನ್, ಕೆ.ಎಲ್.ರಾಹುಲ್ ದೇಶಿ ಟೂರ್ನಿ ಮತ್ತು ಐಪಿಎಲ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದು ಉತ್ತಮ ಪ್ರದರ್ಶನ ನೀಡಿರುವ ಕೆ.ಎಲ್.ರಾಹುಲ್, ಕೆರಿಬಿಯನ್ನರ ವಿರುದ್ಧ ಉತ್ತಮ ಪ್ರದರ್ಶನ ತೋರಿದರೆ ಟೀಂ ಇಂಡಿಯಾದಲ್ಲಿ ಆರಂಬಿಕನ ಸ್ಥಾನ ಭದ್ರಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಟಿ-20 ವಿಶ್ವಕಪ್ ಟೂರ್ನಿಯ ದೃಷ್ಟಿಯಿಂದ ಪ್ರತಿಯೊಂದು ಟಿ-20 ಪಂದ್ಯಗಳು ಮುಖ್ಯವಾಗಿದ್ದು, ರಾಹುಲ್ ಆರಂಭಿಕನಾಗಿ ಅಬ್ಬರಿಸಿದ್ರೆ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗುವ ಸಾಧ್ಯೆತೆ ಇದೆ.
ಇನ್ನು ಶಿಖರ್ ಧವನ್ ಬದಲಿಗೆ ಸ್ಥಾನ ಪಡೆದುಕೊಂಡಿರುವ ಯುವ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ಗೆ ಆಡುವ 11ರ ಬಳಗದಲ್ಲಿ ಸ್ಥಾನ ಸಿಗುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ರಿಷಭ್ ಪಂತ್ ಕಣಕ್ಕಿಳಿಯುವ ಸಾಧ್ಯತೆಯೇ ಹೆಚ್ಚಿದೆ.