ದುಬೈ:ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ 8ನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆಮಾಡಿಕೊಂಡಿದೆ.
ಉದ್ಘಾಟನಾ ಪಂದ್ಯ ಹಾಗೂ ಪಂಜಾಬ್ ವಿರುದ್ಧ ಹೊರೆತುಪಡಿಸಿ ಉಳಿದೆಲ್ಲಾ ಪಂದ್ಯಗಳನ್ನು ಸೋತಿರುವ ಚೆನ್ನೈ ತಂಡ ಟೂರ್ನಿಯಲ್ಲಿ ಪ್ಲೇ ಆಫ್ ಕನಸನ್ನು ಗಟ್ಟಿಗೊಳಿಸಬೇಕೆಂದರೆ ಈ ಪಂದ್ಯ ಕೊನೆಯ ಅವಕಾಶವಾಗಿದೆ. ಇಂದಿನ ಪಂದ್ಯದಲ್ಲಿ ಯುವ ಬ್ಯಾಟ್ಸ್ಮನ್ ಜಗದೀಶನ್ ಬದಲಿಗೆ ಸ್ಪಿನ್ನರ್ ಪಿಯೂಷ್ ಚಾವ್ಲಾ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.
ಇತ್ತ ಆಡಿರು 7 ಪಂದ್ಯಗಳಲ್ಲಿ 3 ಗೆಲುವು ಹಾಗೂ 4 ಸೋಲುಗಳೊಂದಿಗೆ 5ನೇ ಸ್ಥಾನದಲ್ಲಿರುವ ಹೈದರಾಬಾದ್ ತಂಡಕ್ಕೂ ಕೂಡ ಗೆಲುವಿನ ಹಾದಿಗೆ ಮರಳಬೇಕಿದೆ. ಹಾಗಾಗಿ ಈ ಪಂದ್ಯ ಎರಡೂ ತಂಡಗಳಿಗೂ ಮಹತ್ವವಾಗಿದೆ. ಹೈದರಾಬಾದ್ ತಂಡ ಅಭಿಷೇಕ್ ಶರ್ಮಾ ಬದಲಿಗೆ ನದೀಮ್ಗೆ ಅವಕಾಶ ನೀಡಿದೆ.