ದುಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸ್ಟಾರ್ ಪ್ಲೇಯರ್ ಕ್ರಿಸ್ ಗೇಲ್ ಕ್ರೀಡಾಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದು, ಐಪಿಎಲ್ ಟೂರ್ನಿ ನೋಡುವುದು ನಿಲ್ಲಿಸಬೇಡಿ ಎಂದು ಮನವಿ ಮಾಡಿದ್ದಾರೆ.
ಐಪಿಎಲ್ನಲ್ಲಿ 7 ಪಂದ್ಯಗಳ ನಂತರ ಕಣಕ್ಕಿಳಿದು ಅರ್ಭಟಿಸಿದ ಗೇಲ್, ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲವಾಗಿದ್ದರು. ಹೀಗಾಗಿ ತಂಡ ಸೋಲು ಕಾಣುವ ಮೂಲಕ ಟೂರ್ನಿಯಿಂದ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ಕ್ರೀಡಾಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿರುವ ಗೇಲ್, ಉಳಿದ ಐಪಿಎಲ್ ಪಂದ್ಯಗಳನ್ನು ವೀಕ್ಷಣೆ ಮಾಡಿ ಎಂದಿದ್ದಾರೆ.