ರಾಯಪುರ:ವಿಶ್ವ ರಸ್ತೆ ಸುರಕ್ಷತಾ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಒಪ್ಪಿಗೆ ನೀಡಿದ್ದಾರೆ. ಈ ಪಂದ್ಯಾವಳಿ ಮಾರ್ಚ್ 2 ರಿಂದ ಮಾರ್ಚ್ 21 ರವರೆಗೆ ರಾಯಪುರದಲ್ಲಿ ನಡೆಯಲಿದ್ದು, ಈ ಕ್ರಿಕೆಟ್ ಟೂರ್ನಿಯಲ್ಲಿ ಪ್ರಸಿದ್ಧ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ಜಾಂಟಿ ರೋಡ್ಸ್, ಬ್ರೆಟ್ ಲೀ, ಬ್ರಿಯಾನ್ ಲಾರಾ, ಮುತ್ತಯ್ಯ ಮುರಳೀಧರನ್ ಭಾಗವಹಿಸಲಿದ್ದಾರೆ.
ಪಂದ್ಯಾವಳಿಯ ಆಯುಕ್ತ ಮತ್ತು ಖ್ಯಾತ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರು ವಿಶ್ವ ರಸ್ತೆ ಸುರಕ್ಷತಾ ಸರಣಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಕುರಿತು ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರೊಂದಿಗೆ ಚರ್ಚೆ ನಡೆಸಿದ್ದರು. ಗವಾಸ್ಕರ್ ಅವರ ಕೋರಿಕೆಯ ಮೇರೆಗೆ ಈ ಪಂದ್ಯಾವಳಿಯನ್ನು ಆಯೋಜಿಸಲು ಸಿಎಂ ಅನುಮತಿ ನೀಡಿದ್ದಾರೆ. ಈ ಪಂದ್ಯಾವಳಿಯಲ್ಲಿ ಭಾರತ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಸೇರಿದಂತೆ ಶ್ರೀಲಂಕಾ ತಂಡಗಳು ಭಾಗವಹಿಸಲಿವೆ.