ಕೇಪ್‌ಟೌನ್:ಕ್ರಿಕೆಟ್ ದಕ್ಷಿಣ ಆಫ್ರಿಕಾದ (ಸಿಎಸ್‌ಎ) ಅಧ್ಯಕ್ಷ ಸ್ಥಾನಕ್ಕೆ ಕ್ರಿಸ್ ನೆಂಜಾನಿ ರಾಜೀನಾಮೆ ನೀಡಿದ್ದಾರೆ.
ಕ್ರಿಸ್ ನೆಂಜಾನಿ ಸೋಮವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ವಾರ್ಷಿಕ ಸಾಮಾನ್ಯ ಸಭೆಗೆ ಎರಡು ವಾರಗಳಿರುವಾಗ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಆದರೆ ರಾಜಿನಾಮೆಗೆ ನಿಖರವಾದ ಕಾರಣ ನೀಡಿಲ್ಲ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ತಿಳಿಸಿದೆ.
ನಿಂಜಾನಿ ಸಿಎಸ್‌ಎ ಸಂವಿಧಾನವನ್ನು ಬದಲಾಯಿಸಿ ತಮ್ಮ ಅಧಿಕಾರಾವಧಿಯನ್ನು ಒಂದು ವರ್ಷ ಹೆಚ್ಚಿಸಿಕೊಂಡು ವಿವಾದಕ್ಕೆ ಸಿಲುಕಿದ್ದರು. ಅಲ್ಲದೆ ಇತ್ತೀಚೆಗೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದರಿಂದಅವರು ತನ್ನ ಕರ್ತವ್ಯದಿಂದ ಕೆಳಗಿಳಿದಿರುವುದಾಗಿ ತಿಳಿದು ಬಂದಿದೆ.
ಮಾಹಿತಿಯ ಪ್ರಕಾರ, ನೆಂಜಾನಿ ಅವರು ಕಳೆದ ಶುಕ್ರವಾರವೇ ಜವಾಬ್ದಾರಿಯಿಂದ ಕೆಳಗಿಳಿದಿದ್ದಾರೆ. ವಾರ್ಷಿಕ ಸಭೆಗೆ 2 ವಾರಗಳು ಬಾಕಿಯಿರುವಾಗಲೇ ರಾಜೀನಾಮೆ ನೀಡಿದ್ದಾರೆ.
ಕ್ರಿಸ್ ನೆಂಜಾನಿ ಅವರು ಆಗಸ್ಟ್ 15 ರಿಂದ ಜಾರಿಗೆ ಬರುವಂತೆ ಸದಸ್ಯರ ಮಂಡಳಿ ಅಧ್ಯಕ್ಷ ಮತ್ತು ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕರ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೆಪ್ಟೆಂಬರ್ 5 ರಂದು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ತನ್ನ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಿದೆ.