ರಾಜ್ಕೋಟ್:ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಮಾಸ್ಕ್ ಹಾಕಿಕೊಳ್ಳದೇ ರಸ್ತೆಗಿಳಿದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಮಾಸ್ಕ್ ಹಾಕಿಕೊಳ್ಳದೇ ಪೊಲೀಸರೊಂದಿಗೆ ಕಿರಿಕ್ ಮಾಡಿದ್ರಾ ಕ್ರಿಕೆಟರ್ ಜಡೇಜಾ!? - ರವೀಂದ್ರ ಜಡೇಜಾ
ಮಾಸ್ಕ್ ಹಾಕಿಕೊಳ್ಳದೇ ರಸ್ತೆಯಲ್ಲಿ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದ ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
Cricketer Ravindra Jadeja
ಗುಜರಾತ್ನ ಕಿಸನ್ಪರಾ ಚೌಕ್ನಲ್ಲಿ ಪತ್ನಿ ಜತೆ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಅವರು ಮಾಸ್ಕ್ ಹಾಕಿಕೊಳ್ಳದೇ ಇರುವುದು ಪೊಲೀಸರ ಗಮನಕ್ಕೆ ಬಂದಿದೆ. ಈ ವೇಳೆ ಅವರನ್ನ ತಡೆದು ವಿಚಾರಣೆ ನಡೆಸಿದ್ದಾರೆ. ಆಗ ರವೀಂದ್ರ ಜಡೇಜಾ ಹಾಗೂ ಅವರ ಪತ್ನಿ ರೇವಾಬಾ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಯಾವುದೇ ದಂಡವಿಲ್ಲದೆ ಅವರಿಗೆ ಹೋಗುವಂತೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.