ಸಿಡ್ನಿ:ನ್ಯೂ ಸೌತ್ ವೇಲ್ಸ್ ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್‌ಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ವೀಕ್ಷಕರ ಸಂಖ್ಯೆಯನ್ನು ಶೇ. 50 ರಿಂದ ಶೇ.25ಕ್ಕೆ ಕಡಿತಗೊಳಿಸಲಾಗಿದೆ.
ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಒಟ್ಟು 38,000 ಆಸನ ವ್ಯವಸ್ಥೆಯಿದ್ದು, ಕೋವಿಡ್ 19 ಪರಿಣಾಮ ಸಾಮಾಜಿಕ ಅಂತರ ಕಾಪಾಡಲು ಅರ್ಧದಷ್ಟು ಮಂದಿಗೆ ಮಾತ್ರ ಪಂದ್ಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಇದೀಗ ಮತ್ತೆ ಅರ್ಧದ ಬದಲು ಕೇವಲ ಶೇ 25 ಮಂದಿಗೆ ಮಾತ್ರ ವೀಕ್ಷಣೆ ಮಾಡಲು ಅವಕಾಶ ನೀಡಲು ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಸಿಡ್ನಿ ಕ್ರಿಕೆಟ್ ಮೈದಾನದ ಆಡಳಿತ ಮಂಡಳಿ ನಿರ್ಧರಿಸಿವೆ.