ಹೈದರಾಬಾದ್:ಆ್ಯಶಸ್ ಕ್ರಿಕೆಟ್ ಸರಣಿಯಲ್ಲಿ ರನ್ ಹೊಳೆ ಹರಿಸುತ್ತಿರುವ ಆಸೀಸ್ ಮಾಜಿ ನಾಯಕ ಸ್ಟೀವ್ ಸ್ಮಿತ್ ಅವರನ್ನು ಭಾರತದ ಜಸ್ಪ್ರೀತ್ ಬುಮ್ರಾ ನೂರಕ್ಕೆ 100ಷ್ಟು ಪೆವಿಲಿಯನ್ಗೆ ಅಟ್ಟುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ಇಂಗ್ಲೆಂಡ್ ಮಾಜಿ ಬೌಲರ್ ಡಾರೆನ್ ಗೌಪ್ ಪ್ರತಿಕ್ರಿಯಿಸಿದ್ದಾರೆ.
ಬಾಲ್ ಟ್ಯಾಂಪರಿಂಗ್ ಕೇಸ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಿರುವ ಸ್ಮಿತ್ ಇಂಗ್ಲೆಂಡ್ ಬೌಲರ್ಗಳನ್ನು ಲೀಲಾಜಾಲವಾಗಿ ದಂಡಿಸುವ ಮೂಲಕ ಆ್ಯಶಸ್ ಸರಣಿಯ 4 ಇನ್ನಿಂಗ್ಸ್ಗಳಲ್ಲಿ 589 ರನ್ ಪೇರಿಸಿದ್ದಾರೆ. ಸರಣಿಯ ಮೊದಲ ಪಂದ್ಯದ ಎರಡೂ ಇನ್ನಿಂಗ್ಸ್ಗಳಲ್ಲಿ ಶತಕ ಗಳಿಸಿದ್ದ ಸ್ಮಿತ್ 2ನೇ ಟೆಸ್ಟ್ ಪಂದ್ಯದ ವೇಳೆ ಆಂಗ್ಲರ ಜೋಪ್ರಾ ಆರ್ಚರ್ ಬೌಲಿಂಗ್ನಲ್ಲಿ ಗಾಯಗೊಂಡು ಪಂದ್ಯದಿಂದ ಹೊರಗುಳಿದಿದ್ದರು. ಆದರೆ, ಮೂರನೇ ಪಂದ್ಯದಲ್ಲಿ ದ್ವಿಶತಕ (211) ಬಾರಿಸಿ ಮಿಂಚಿದ್ದಾರೆ.