ಹೈದರಾಬಾದ್: ಭಾನುವಾರ ನಡೆದ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಶತಕ ಸಾಧನೆ ಮಾಡುವ ಮೂಲಕ ಐಪಿಎಲ್ನಲ್ಲಿ ಸನ್ ರೈಸರ್ಸ್ನ ಮಾಜಿ ನಾಯಕ ಡೇವಿಡ್ ವಾರ್ನರ್ ಹಲವು ದಾಖಲೆಗಳನ್ನು ಮುರಿದ್ದಾರೆ.
ಒಂದು ವರ್ಷದ ನಿಷೇಧ ಶಿಕ್ಷೆಯಿಂದ ಕ್ರಿಕೆಟ್ನಿಂದ ದೂರವಿದ್ದ ವಾರ್ನರ್ ಪ್ರಸ್ತುತ ವರ್ಷದ ಐಪಿಎಲ್ ಪಂದ್ಯದಲ್ಲೂ ಅಬ್ಬರಿಸುತ್ತಿದ್ದಾರೆ. ಈಗಾಗಲೆ ಆಡಿರುವ ಮೂರು ಪಂದ್ಯಗಳಲ್ಲೂ ಎರಡು ಅರ್ಧಶತಕ, ಒಂದು ಶತದ ಸಹಿತ 254 ರನ್ ಸಿಡಿಸಿದ್ದಾರೆ.
ನಿನ್ನೆಯ ಪಂದ್ಯದಲ್ಲಿ ವಾರ್ನರ್ 55 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್ ಸಹಿತ ಬರೋಬ್ಬರಿ 100 ರನ್ ಗಳಿಸಿ ಐಪಿಎಲ್ನಲ್ಲಿ ತಮ್ಮ 4ನೇ ಶತಕ ಪೂರ್ಣಗೊಳಿಸಿರು. ಈ ಮೂಲಕ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಹಾಗೂ ವಾಟ್ಸನ್ ದಾಖಲೆ ಸರಿಗಟ್ಟಿದರು. ಕೊಹ್ಲಿ ಕೂಡ ಐಪಿಎಲ್ನಲ್ಲಿ 4 ಶತಕ ಸಿಡಿಸಿದ್ದಾರೆ. ಇನ್ನು ಕ್ರಿಸ್ ಗೇಲ್ 6 ಸತಕ ಸಿಡಿಸಿ ಹೆಚ್ಚು ಶತಕ ಸಿಡಿಸಿದ ಆಟಗಾರರ ಸಾಲಿನಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.