ಶಾರ್ಜಾ: ಕ್ವಿಂಟನ್ ಡಿಕಾಕ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 208 ರನ್ಗಳ ಬೃಹತ್ ಮೊತ್ತ ದಾಖಲಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್ ತಂಡದ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು..
ಆದರೆ ಕಳೆದ ಮೂರು ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದ್ದ ಕ್ವಿಂಟನ್ ಡಿಕಾಕ್ ಕೇವಲ 39ಎಸೆತಗಳಲ್ಲಿ ತಲಾ 4 ಬೌಂಡರಿ ಹಾಗೂ ಸಿಕ್ಸರ್ಗಳ ಸಹಿತ 67 ರನ್ ಸಿಡಿಸಿ ತಂಡಕ್ಕೆ ನೆರವಾದರು. ಅವರು 2ನೇ ವಿಕೆಟ್ ಜೊತೆಯಾಟದಲ್ಲಿ ಸೂರ್ಯಕುಮಾರ್ ಯಾದವ್ ಜೊತೆಗೂಡಿ 42 ರನ್ ಸೇರಿಸಿದರು. ಯಾದವ್ 18 ಎಸೆತಗಳಲ್ಲಿ 6 ಬೌಂಡರಿ ಸಹಿತ 27 ರನ್ಗಳಿಸಿ ಔಟಾದರು.
ನಂತರ ಬಂದ ಇಶಾನ್ ಕಿಶನ್ 23 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ 31, ಹಾರ್ದಿಕ್ ಪಾಂಡ್ಯ 19 ಎಸೆತಗಳಲ್ಲಿ 2 ಬೌಂಡರಿ, 2ಸಿಕ್ಸರ್ ಸಹಿತ 28, ಪೊಲಾರ್ಡ್ 13 ಎಸೆತಗಳಲ್ಲಿ 3 ಸಿಕ್ಸರ್ ಸಹಿತ ಔಟಾಗದೆ 25, ಕೇನಾಲ್ ಪಾಂಡ್ಯ ಕೇವಲ 4 ಎಸೆತಗಳಲ್ಲಿ ಎರಡು ಸಿಕ್ಸರ್, 2 ಬೌಂಡರಿ ಸಹಿತ 20 ರನ್ಗಳಿಸಿ ಮುಂಬೈ ತಂಡ 208 ರನ್ಗಳ ಬೃಹತ್ ಮೊತ್ತ ಕಲೆಯಾಕಲು ನೆರವಾದರು.
ಸನ್ರೈಸರ್ಸ್ ಪರ ಸಂದೀಪ್ ಶರ್ಮಾ 4 ಓವರ್ಗಳಲ್ಲಿ 41 ರನ್ ನೀಡಿ 2 ವಿಕೆಟ್, ಸಿದ್ಧಾರ್ಥ್ ಕೌಲ್ 64 ರನ್ ನೀಡಿ 2 ವಿಕೆಟ್ ಹಾಗೂ ರಶೀದ್ ಖಾನ್ 22 ರನ್ ನೀಡಿ ಒಂದು ವಿಕೆಟ್ ಪಡೆದರು.