ಮುಂಬೈ: ಟೀಂ ಇಂಡಿಯಾ ಆಟಗಾರರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಇ-ಮೇಲ್ ಭಾರತೀಯ ಕ್ರಿಕೆಟ್ ಮಂಡಳಿ ಕಂಟ್ರೋಲ್ ರೂಮ್ಗೆ ಬಂದಿದೆ. ಪ್ರಕರಣ ಸಂಬಂಧ ಶಂಕಿತ ವ್ಯಕ್ತಿಯೊಬ್ಬನನ್ನು ಅರೆಸ್ಟ್ ಮಾಡಲಾಗಿದೆ.
ಟೀಂ ಇಂಡಿಯಾ ಕ್ರಿಕೆಟರ್ಸ್ಗೆ ಕೊಲೆ ಬೆದರಿಕೆ! ಬಿಸಿಸಿಐಗೆ ಬಂತು ಇ-ಮೇಲ್
ಟೀಂ ಇಂಡಿಯಾ ತಂಡದ ಆಟಗಾರರಿಗೆ ಕೊಲೆ ಬೆದರಿಕೆ ಹಾಕಿರುವ ಇ-ಮೇಲ್ ಬಂದಿದ್ದು, ಪ್ರಕರಣ ಸಂಬಂಧ ಮುಂಬೈ ಭಯೋತ್ಪಾದನಾ ನಿಗ್ರಹ ದಳ ಓರ್ವ ವ್ಯಕ್ತಿಯನ್ನು ಬಂಧಿಸಿದೆ.
ಟೀಂ ಇಂಡಿಯಾ/team india
ಆಗಸ್ಟ್ 16ರಂದು ಈ ಬೆದರಿಕೆ ಇ-ಮೇಲ್ ಕಳುಹಿಸಲಾಗಿದ್ದು, ಬಿಸಿಸಿಐ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದಾದ ಬಳಿಕ ಎಟಿಎಸ್ ಪ್ರಕರಣದ ತನಿಖೆ ನಡೆಸಿದ್ದುವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಆರೋಪಿಯನ್ನು ಕೋರ್ಟ್ಗೆ ಹಾಜರು ಪಡಿಸಲಾಗಿದ್ದು, ಆಗಸ್ಟ್ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸದ್ಯ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿದ್ದು ಇಂದಿನಿಂದ ಕ್ರಿಕೆಟ್ ಟೆಸ್ಟ್ ಸರಣಿ ಆಡಲಿದೆ. ಬೆದರಿಕೆ ನಿಟ್ಟಿನಲ್ಲಿ ತಂಡಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದೆ.