ನವದೆಹಲಿ: ಇಲ್ಲಿನ ಫಿರೋಜ್ ಷಾ ಕೊಟ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಮುಂಬೈ ವಿರುದ್ಧದ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಡೆಲ್ಲಿ 211 ರನ್ಗಳಿಸಿ 37 ರನ್ಗಳ ಜಯ ಸಾಧಿಸಿತ್ತು. ಇದೀಗ ಚೆನ್ನೈ ವಿರುದ್ಧವೂ ಅದೇ ಪ್ರದರ್ಶನ ತೋರುವ ನಿಟ್ಟಿನಲ್ಲಿ ಅಯ್ಯರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಈ ಪಂದ್ಯದಲ್ಲೂ ಚೆನ್ನೈ ಮೂವರು ವಿದೇಶಿ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ವಿಶೇಷವೆಂದರೆ ಡೆಲ್ಲಿ ಕೂಡ ಮೂವರು ವಿದೇಶಯರನ್ನು ಮಾತ್ರ ಆಡಿಸುತ್ತಿದ್ದು ಬೌಲ್ಟ್ ಬದಲು ಸ್ಪಿನ್ನರ್ ಅಮಿತ್ ಮಿಶ್ರಾಗೆ ಅವಕಾಸ ಕಲ್ಪಿಸಲಾಗಿದೆ.