ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದರೆ ಎಂಎಸ್ ಧೋನಿ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳಲಿದ್ದಾರೆ ಎಂಬ ಮಾತು ಗಂಭೀರವಾಗಿ ಕೇಳಿ ಬಂದಿದ್ದವು. ಆದ್ರೆ ಐಪಿಎಲ್ ಇದೀಗ ಮುಂದೂಡಿಕೆಯಾಗಿದ್ದರಿಂದ ಧೋನಿ ಭವಿಷ್ಯ ಮತ್ತಷ್ಟು ಗೊಂದಲದಲ್ಲಿ ಸಿಲುಕಿಕೊಂಡಿದೆ.
ಧೋನಿ ಕುರಿತು ಮಾತನಾಡಿರುವ ಟೀಂ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟ್ಸಮನ್ ವಿರೇಂದ್ರ ಸೆಹ್ವಾಗ್, ಧೋನಿ ತಂಡಕ್ಕೆ ಕಮ್ಬ್ಯಾಕ್ ಮಾಡುವುದು ತುಂಬಾ ಕಠಿಣವಾಗಿದೆ ಎಂದಿದ್ದಾರೆ.
ವಿಕೆಟ್ ಕೀಪರ್ ರೂಪದಲ್ಲಿ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ತಂಡದಲ್ಲಿದ್ದಾರೆ. ತಂಡದಲ್ಲಿ ಉತ್ತಮ ಪ್ರದರ್ಶನ ಮೂಡಿ ಬರುತ್ತಿರುವ ಕಾರಣ ಧೋನಿ ಅವರಿಗೆ ಏಕೆ ಅಂಟಿಕೊಳ್ಳಬೇಕು ಎಂದು ನಾನು ಭಾವಿಸುತ್ತೇನೆ ಎಂದು ಸೆಹ್ವಾಗ್ ಹೇಳಿದ್ದಾರೆ.
ಇದೇ ವೇಳೆ ನ್ಯೂಜಿಲ್ಯಾಂಡ ಪ್ರವಾಸದಲ್ಲಿ ಟೀಂ ಇಂಡಿಯಾ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅವರೂ ನಮಗಿಂತಲೂ ಉತ್ತಮವಾದ ಕ್ರಿಕೆಟ್ ಆಡಿದ್ದಾರೆ ಎಂದಿದ್ದಾರೆ. ಆದರೆ ಟಿ-20ಯಲ್ಲಿ ಆದಷ್ಟು ಬೇಗ ಕಮ್ಬ್ಯಾಕ್ ಮಾಡುವುದು ಕಷ್ಟ ಎಂದು ಅವರು ಹೇಳಿದ್ದಾರೆ.
ಗಾಯದಿಂದ ಗುಣಮುಖರಾಗಿ ತಂಡಕ್ಕೆ ಆಗಮಿಸಿರುವ ಹಾರ್ದಿಕ್ ಪಾಂಡ್ಯ ತಂಡದಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಲಿದ್ದಾರೆ ಎಂದು ತಿಳಿಸಿದ್ದಾರೆ.