ಕೋಲ್ಕತ್ತಾ:ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಈಗಾಗಲೇ ಪ್ರಾರಂಭಗೊಳ್ಳಬೇಕಾಗಿತ್ತು. ಆದರೆ, ದೇಶದಲ್ಲಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಮುಂದೂಡಿಕೆಯಾಗಿದ್ದು, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ವೇಗದ ಬೌಲರ್ ಮಾತನಾಡಿದ್ದಾರೆ.
ಮಾರ್ಚ್ 29ರಿಂದ ಆರಂಭಗೊಳ್ಳಬೇಕಾದ ಟೂರ್ನಿ ಕೊರೊನಾ ವೈರಸ್ ಭೀತಿಯಿಂದಾಗಿ ಮುಂದೂಡಿಕೆಯಾಗಿದ್ದು, ಯಾವಾಗ ನಡೆಯುತ್ತದೆ ಎಂಬುದರ ಬಗ್ಗೆ ಇಲ್ಲಿಯವರೆಗೂ ಖಚಿತ ಮಾಹಿತಿ ಇಲ್ಲ. ಇದೀಗ ಮಾತನಾಡಿರುವ ಮೊಹಮ್ಮದ್ ಶಮಿ, ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುವುದು ಬಹುತೇಕ ಅನುಮಾನವಾಗಿದ್ದು, ಟಿ-20 ವಿಶ್ವಕಪ್ ಕೂಡ ಮುಂದೂಡಿಕೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.