ದುಬೈ: ಸೆಪ್ಟೆಂಬರ್ 19ರಿಂದ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲಿದ್ದು, ಅದಕ್ಕಾಗಿ ವೀಕ್ಷಕರಿಗೆ ಅವಕಾಶ ನೀಡುವುದಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವುದೇ ರೀತಿಯ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಆದರೆ ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಯುಎಇ ಸರ್ಕಾರ ಟೂರ್ನಮೆಂಟ್ ವೀಕ್ಷಿಸಲು ಶೇ.30ರಿಂದ 50ರಷ್ಟು ಅಭಿಮಾನಿಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ದುಬೈ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಮುಬಾಶೀರ್ ಉಸ್ಮಾನಿ ಮಾತನಾಡಿದ್ದು, ಮೈದಾನಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಶೇ.30ರಿಂದ 50ರಷ್ಟು ಕ್ರೀಡಾಭಿಮಾನಿಗಳಿಗೆ ಅವಕಾಶ ನೀಡುವ ವಿಚಾರವಾಗಿ ಚರ್ಚೆ ನಡೆದಿದೆ ಎಂದು ತಿಳಿಸಿದ್ದಾರೆ.