ಸೌತಾಂಪ್ಟನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ಪಾಕಿಸ್ತಾನ ತಂಡ ಆರಂಭಿಕ ಆಘಾತ ಅನುಭವಿಸಿದೆ. ಮೊದಲ ದಿನದಾಟ ಮಳೆಯಿಂದ ನಿಂತಿದೆ.
ರೋಜ್ಬೌಲ್ನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ನಲ್ಲಿ ಪಾಕಿಸ್ತಾನ 45.4 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 126 ರನ್ ಗಳಿಸಿ ಸಂಕಷ್ಟದಲ್ಲಿದೆ. ಮೊದಲ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಅದ್ಭುತ ಶತಕ ಸಿಡಿಸಿದ್ದ ಶಾನ್ ಮಸೂದ್ ಕೇವಲ 1 ರನ್ಗೆ ಜೇಮ್ಸ್ ಆ್ಯಂಡರ್ಸನ್ ಬೌಲಿಂಗ್ನಲ್ಲಿ ಎಲ್ಬಿಡಬ್ಲ್ಯೂ ಬಲೆಗೆ ಬಿದ್ದರು.