ಮ್ಯಾಂಚೆಸ್ಟರ್: ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಹಾಗೂ ಸರಣಿಯನ್ನು ನಿರ್ಣಯಿಸುವ ಪಂದ್ಯದಲ್ಲಿ ಟಾಸ್ ಗೆದ್ದ ಮಾರ್ಗನ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಗಾಯದಿಂದ ಕಳೆದೆರಡು ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್ಮನ್ ಸ್ಟಿವ್ ಸ್ಮಿತ್ ಇಂದಿನ ಪಂದ್ಯದಲ್ಲೂ ಕಣಕ್ಕಿಳಿಯುತ್ತಿಲ್ಲ. ಕಳೆದ ಪಂದ್ಯದ ತಂಡವನ್ನು ಆಡಿಸುತ್ತಿರುವುದಾಗಿ ಆಸೀಸ್ ನಾಯಕ ಆ್ಯರೋನ್ ಫಿಂಚ್ ಹೇಳಿದ್ದಾರೆ.
ಇನ್ನು ಇಂಗ್ಲೆಂಡ್ ತಂಡ ಕಳೆದ ಪಂದ್ಯದಲ್ಲಿ 3 ವಿಕೆಟ್ ಪಡೆದಿದ್ದ ಸ್ಯಾಮ್ ಕರ್ರನ್ರನ್ನು ತಂಡದಿಂದ ಕೈಬಿಟ್ಟಿದೆ. ಅವರ ಜಾಗಕ್ಕೆ ಅನುಭವಿ ಮಾರ್ಕ್ವುಡ್ರನ್ನು ಸೇರ್ಪಡೆಗೊಳಿಸಿದೆ.
ಆಸ್ಟ್ರೇಲಿಯಾ : ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್ (ಸಿ), ಮಾರ್ಕಸ್ ಸ್ಟೋಯ್ನಿಸ್, ಮಾರ್ನಸ್ ಲ್ಯಾಬುಶೇನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ಪ), ಗ್ಲೆನ್ ಮ್ಯಾಕ್ಸ್ ವೆಲ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್‌ವುಡ್, ಆಡಮ್ ಜಂಪಾ
ಇಂಗ್ಲೆಂಡ್ : ಜೇಸನ್ ರಾಯ್, ಜಾನಿ ಬೈರ್‌ಸ್ಟೋವ್, ಜೋ ರೂಟ್, ಇಯೊನ್ ಮಾರ್ಗನ್ (ಸಿ), ಜೋಸ್ ಬಟ್ಲರ್ (ಪ), ಸ್ಯಾಮ್ ಬಿಲ್ಲಿಂಗ್ಸ್, ಕ್ರಿಸ್ ವೋಕ್ಸ್, ಟಾಮ್ ಕರ್ರನ್, ಆದಿಲ್ ರಶೀದ್, ಜೋಫ್ರಾ ಆರ್ಚರ್, ಮಾರ್ಕ್ ವುಡ್