ಕೇಪ್ ಟೌನ್: ಇತ್ತೀಚೆಗೆ ಮುಕ್ತಾಯಗೊಂಡ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ವೈಟ್‌ವಾಶ್ ಮಾಡಿದ ಇಂಗ್ಲೆಂಡ್ ತಂಡ ಐಸಿಸಿ ಟಿ- 20 ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದೆ.
ಇಂಗ್ಲೆಂಡ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 3-0 ಮೂಲಕ ಸರಣಿ ಗೆಲುವು ಸಾಧಿಸಿದೆ. ಇಯಾನ್ ಮೋರ್ಗಾನ್ ನೇತೃತ್ವದ ಆಂಗ್ಲರ ಪಡೆ 2018ರ ಅಕ್ಟೋಬರ್‌ನಿಂದ ಇಲ್ಲಿಯವರೆಗೆ ಟಿ-20 ಕ್ರಿಕೆಟ್ನಲ್ಲಿ ಎಲ್ಲಾ ಸರಣಿಗಳನ್ನು ಗೆದ್ದು ಬೀಗಿದೆ. ಇಂಗ್ಲೆಂಡ್ ತಂಡವು ಏಕದಿನ ವಿಭಾಗದ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಟೆಸ್ಟ್ ಪಾರ್ಮೆಟ್ನಲ್ಲಿ ನಾಲ್ಕನೇ ಸ್ಥಾನದಲ್ಲಿದೆ.
ಟಿ-20 ಫಾರ್ಮೆಟ್ನಲ್ಲಿ ಆಸ್ಟ್ರೇಲಿಯಾ ತಂಡವು ಎರಡನೇ ಸ್ಥಾನದಲ್ಲಿದ್ದರೆ, ಟೀಂ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ನಂತರದ ಸ್ಥಾನದಲ್ಲಿ ಪಾಕಿಸ್ತಾನ, ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ತಂಡಗಳಿವೆ.