ಮ್ಯಾಂಚೆಸ್ಟರ್: ಮೊದಲ ಪಂದ್ಯದಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ತಂಡ ಎರಡನೇ ಟೆಸ್ಟ್ನಲ್ಲಿ 113ರನ್ಗಳ ಭರ್ಜರಿ ಗೆಲುವು ಸಾಧಿಸಿ, ಸರಣಿಯಲ್ಲಿ ಸಮಬಲ ಸಾಧಿಸಿದೆ.
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿ: ಸಮಬಲ ಸಾಧಿಸಿದ ಇಂಗ್ಲೆಂಡ್ - ಇಂಗ್ಲೆಂಡ್
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ 113 ರನ್ಗಳ ಭರ್ಜರಿ ಗೆಲುವು ಬಾರಿಸಿದೆ. ಈ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.
ಸ್ಟುವರ್ಟ್ ಬ್ರಾಡ್ ಹಾಗೂ ಕ್ರಿಸ್ ವೋಕ್ ಅವರ ಬಿಗಿ ಬೌಲಿಂಗ್ ದಾಳಿಯಿಂದಾಗಿ 2ನೇ ಟೆಸ್ಟ್ ಪಂದ್ಯ ಗೆದ್ದು ವಿಂಡೀಸ್ ಪಡೆಗೆ ತಿರುಗೇಟು ನೀಡಿದೆ. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 1-1ರಿಂದ ಸಮಬಲ ಸಾಧಿಸುವ ಮೂಲಕ ಮೂರನೇ ಪಂದ್ಯ ಕುತೂಹಲ ಮೂಡುವಂತೆ ಮಾಡಿದೆ. ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 469 ರನ್ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ 287 ರನ್ ಗಳಿಗೆ ಆಲೌಟ್ ಆಗಿತ್ತು.
ಬಳಿಕ ತನ್ನ 2ನೇ ಇನ್ನಿಂಗ್ಸ್ನಲ್ಲಿ ಇಂಗ್ಲೆಂಡ್ 129 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಈ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ 312 ರನ್ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ವಿಂಡೀಸ್ 198 ರನ್ಗಳಿಗೆ ಆಲೌಟ್ ಆಗಿದ್ದು 113 ರನ್ಗಳಿಂದ ಸೋಲು ಕಂಡಿದೆ