ಆಕ್ಲೆಂಡ್:ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲು ಮಾಡಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಗೆಲುವು ದಾಖಲು ಮಾಡಿ ಶುಭಾರಂಭ ಮಾಡಿದೆ.
ಇದರ ಮಧ್ಯೆ ವಿಕೆಟ್ ಕೀಪರ್ ಆಗಿ ಕಾರ್ಯ ನಿರ್ವಹಿಸುವ ಜವಾಬ್ದಾರಿ ಹೊತ್ತುಕೊಂಡಿರುವ ಕನ್ನಡಿಗ ಕೆಎಲ್ ರಾಹುಲ್ ಇದೇ ಮೊದಲ ಸಲ ತಮ್ಮಗೆ ನೀಡುರುವ ಹೊಸ ಜವಾಬ್ದಾರಿ ಕುರಿತು ಮನಸ್ಸು ಬಿಚ್ಚಿ ಮಾತನಾಡಿದ್ದಾರೆ.
ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸುತ್ತಿರುವ ನಾನು, ಅದನ್ನು ಆನಂದಿಸುತ್ತಿರುವೆ ಎಂದಿರುವ ಕೆಎಲ್ ಸ್ಟಂಪ್ಸ್ನ ಹಿಂಬದಿಯಲ್ಲಿ ನಿಲ್ಲುವುದು ನನಗೆ ಖುಷಿ ನೀಡಿದೆ ಎಂದಿದ್ದಾರೆ. ಈ ಹಿಂದೆ ಕರ್ನಾಟಕ ತಂಡದ ಪರ ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದ್ದು, ಇದೇ ಮೊದಲ ಸಲ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಈ ಹೊಣೆ ಹೊತ್ತುಕೊಂಡಿದ್ದಾರೆ. ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ನಲ್ಲೂ ಅಬ್ಬರಿಸಿದ್ದ ಕೆಎಲ್ 27 ಎಸೆತಗಳಲ್ಲಿ 56ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು.
ಬ್ಯಾಟಿಂಗ್ ಮಾಡಲು ಅನುಕೂಲ
ವಿಕೆಟ್ ಕೀಪಿಂಗ್ ಮಾಡುವುದರಿಂದ ಪಿಚ್ ಯಾವ ರೀತಿಯಲ್ಲಿ ವರ್ತಿಸುತ್ತದೆ ಎಂಬುದು ತಿಳಿದುಕೊಳ್ಳಲು ಸುಲಭವಾಗುತ್ತದೆ. ಬೌಲರ್ ಹಾಗೂ ಕ್ಯಾಪ್ಟನ್ಗೆ ಇದರ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದಿರುವ ರಾಹುಲ್, ಬ್ಯಾಟಿಂಗ್ ಮಾಡುವ ವೇಳೆ ಇದು ಸಹಾಯ ಆಗುತ್ತದೆ ಎಂದು ಹೇಳಿದ್ದಾರೆ.