ನವದೆಹಲಿ: ರಿಷಭ್ ಪಂತ್ ಸ್ಫೋಟಕ ಬ್ಯಾಟಿಂಗ್ ಮತ್ತು ಹನುಮ ವಿಹಾರಿ ಅವರ ತಾಳ್ಮೆಯ ಆಟದ ನೆರವಿನಿಂದ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ ಪಿಂಕ್ ಬಾಲ್ ಅಭ್ಯಾಸ ಪಂದ್ಯದ ಎರಡನೇ ದಿನದಂದು ಭಾರತ ತಂಡ 472 ರನ್ಗಳ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ.
ಮೊದಲನೇ ಇನ್ನಿಂಗ್ಸ್ನಲ್ಲಿ ರನ್ಗಳಿಸಲು ಪರಾದಾಡಿದ್ದ ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳು ದ್ವಿತೀಯ ಇನ್ನಿಂಗ್ಸ್ನಲ್ಲಿ ಎಚ್ಚರಿಕೆಯ ಆಟವಾಡಿದರು. ತಂಡದ ಮೊತ್ತ ಕೇವಲ 4 ಆಗಿದ್ದಾಗ ಆರಂಭಿಕ ಆಟಗಾರ ಪೃಥ್ವಿ ಶಾ 3 ರನ್ಗಳಿಸಿ ಔಟಾದರು. ನಂತರ ಜೊತೆಯಾದ ಮಯಾಂಕ್ ಅಗರವಾಲ್ (61) ಹಾಗೂ ಶುಬ್ಮನ್ ಗಿಲ್ (65) ಟೀಂ ಇಂಡಿಯಾಕ್ಕೆ ಆಸರೆಯಾದ್ರು. ನಾಯಕ ಅಜಿಂಕ್ಯಾ ರಹಾನೆ 38 ಗಳಿಸಿ ಔಟ್ ಆದನಂತರ ಜೊತೆಯಾದ ಹನುಮ ವಿಹಾರಿ ಮತ್ತು ರಿಷಭ್ ಪಂತ್ ಅಸೀಸ್ ಬೌಲರ್ಗಳ ಬೆವರಿಳಿಸಿದ್ರು.