ಇಸ್ಲಾಮಾಬಾದ್:ಪಾಕಿಸ್ತಾನ ಕ್ರಿಕೆಟ್ನ ಎಡಗೈ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ಗೆ ಗುಡ್‌ಬೈ ಹೇಳಿದ್ದಾರೆ.
ವಿಶ್ವಕಪ್ ಕ್ರಿಕೆಟ್ನಲ್ಲಿ ಪಾಕ್ ತಂಡದ ಪರ ಕರಾರುವಾಕ್ ಬೌಲಿಂಗ್ ಪ್ರದರ್ಶನ ನೀಡಿದ್ದ ಅಮೀರ್, ತಮ್ಮ 27ನೇ ವಯಸ್ಸಿನಲ್ಲೇ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವುದು ವಿಶೇಷ. 2009ರಲ್ಲಿ ಶ್ರೀಲಂಕಾ ವಿರುದ್ದದ ಪಂದ್ಯದಿಂದ ಟೆಸ್ಟ್ಗೆ ಪದಾರ್ಪಣೆ ಮಾಡಿದ್ದ ಈ ವೇಗಿ ಇಲ್ಲಿಯವರೆಗೆ 36 ಟೆಸ್ಟ್ ಪಂದ್ಯಗಳಿಂದ 119 ವಿಕೆಟ್ ಪಡೆದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ 2017ರ ಏಪ್ರಿಲ್ನಲ್ಲಿ 44 ರನ್ ನೀಡಿ 6 ವಿಕೆಟ್ ಗಳಿಕೆ ಇವರ ಅತ್ಯುತ್ತಮ ಸಾಧನೆ.
ಇದೀಗ ಏಕದಿನ ಹಾಗೂ ಟಿ-20 ಪಂದ್ಯಗಳಲ್ಲಿ ಮಾತ್ರ ತಂಡವನ್ನು ಪ್ರತಿನಿಧಿಸಲು ನಿರ್ಧರಿಸಿರುವ ಅಮೀರ್, ಮುಂದಿನ ವರ್ಷ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್ನಲ್ಲಿ ಉತ್ತಮ ಪ್ರದರ್ಶನ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.
ಐಸಿಸಿ ಟೆಸ್ಟ್ ಚಾಂಪಿಯನ್ ಆರಂಭಗೊಳ್ಳುವುದಕ್ಕೂ ಮುನ್ನ ಮೊಹಮ್ಮದ್ ಅಮೀರ್ ಈ ನಿರ್ಧಾರ ತೆಗೆದುಕೊಂಡಿರುವುದು ಪಾಕ್ ಕ್ರಿಕೆಟ್ ಪ್ರೇಮಿಗಳಲ್ಲಿ ನಿರಾಶೆ ಮೂಡಿಸಿದೆ. ಈ ಹಿಂದೆ ಇಂಗ್ಲೆಂಡ್ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಚಾಂಪಿಯನ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಅಮೀರ್, ಟೀಂ ಇಂಡಿಯಾ ಬ್ಯಾಟ್ಸ್ಮನ್ಗಳನ್ನು ಮಾರಕವಾಗಿ ಕಾಡಿ ತಂಡ ಚಾಂಪಿಯನ್ ಆಗುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.