ಬೆಂಗಳೂರು: ಸರಣಿ ಗೆಲ್ಲಲು ನಿರ್ಣಾಯಕವಾಗಿರುವ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.
ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ತಲಾ ಒಂದೊಂದು ಪಂದ್ಯ ಗೆದ್ದು ಸಮಬಲ ಸಾಧಿಸಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಶಸ್ತಿಗಾಗಿ ಸೆಣಸಾಡುತ್ತಿದ್ದು ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಭಾರತ ತಂಡ ಎರಡನೇ ಪಂದ್ಯದಲ್ಲಿದ್ದ ತಂಡವನ್ನೇ ಈ ಪಂದ್ಯದಲ್ಲೂ ಆಡಿಸುತ್ತಿದ್ದರೆ, ಆಸ್ಟ್ರೇಲಿಯಾ ವೇಗಿ ಕೇನ್ ರಿಚರ್ಡ್ಸನ್ ಬದಲಿಗೆ ಜೋಸ್ ಹೆಜಲ್ವುಡ್ ಕಣಕ್ಕಿಳಿಯುತ್ತಿದ್ದಾರೆ.
ಚಿನ್ನಸ್ವಾಮಿಯಲ್ಲಿ ಎರಡೂ ತಂಡಗಳು 7 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ 4, ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಒಂದು ಪಂದ್ಯ ರದ್ದುಗೊಂಡಿದೆ. ಇಲ್ಲಿ ಆಡಿರುವ ಕೊನೆಯ ಪಂದ್ಯದಲ್ಲಿ (2017ರಲ್ಲಿ) ಆಸ್ಟ್ರೇಲಿಯಾ 21ರನ್ಗಳ ಅಂತರದಿಂದ ಗೆದ್ದಿತ್ತು.
ಭಾರತ: ರೋಹಿತ್ ಶರ್ಮಾ, ಶಿಖರ್ ಧವನ್, ಕೆ ಎಲ್. ರಾಹುಲ್, ವಿರಾಟ್ ಕೊಹ್ಲಿ( ಕ್ಯಾಪ್ಟನ್), ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪಿತ್ ಬುಮ್ರಾ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆ್ಯರೋನ್ ಫಿಂಚ್( ಕ್ಯಾಪ್ಟನ್) ಮಾರ್ನಸ್ ಲಾಬುಶೇನ್, ಸ್ಟೀವ ಸ್ಮಿತ್, ಆಸ್ಟನ್ ಟರ್ನರ್, ಅಲೆಕ್ಸ್ ಕ್ಯಾರಿ, ಆಸ್ಟನ್ ಅಗರ್, ಪಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಸ್ ಹೆಜಲ್ವುಡ್, ಆ್ಯಡಂ ಜಂಪಾ