ನವದೆಹಲಿ:ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್(ಡಿಡಿಸಿಎ) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಘರ್ಷಣೆ ಸಂಭವಿಸಿದೆ. ಈ ನಡುವೆ, ಡಿಡಿಸಿಎ ವಿಸರ್ಜನೆ ಮಾಡಿ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟರ್ ಮತ್ತು ಸಂಸದ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.
ನಿನ್ನೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಸಭೆಯಲ್ಲಿ ಘರ್ಷಣೆ ನಡೆದ ವಿಡಿಯೋವನ್ನ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಕೆಲವು ವಂಚಕರು ಸಂಘಟನೆಯನ್ನು ಹೇಗೆ ಅಪಹಾಸ್ಯ ಮಾಡುತ್ತಿದ್ದಾರೆ ಎಂದು ನೋಡಿ. ಬಿಸಿಸಿಐ ಕೂಡಲೇ ಡಿಡಿಸಿಎ ವಿಸರ್ಜಿಸುವುದರ ಜೊತೆಗೆ ಘರ್ಷಣೆಯಲ್ಲಿ ಭಾಗಿಯಾದವರನ್ನು ಜೀವಿತಾವಧಿಯವರೆಗೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.