ನವದೆಹಲಿ:ಐಸಿಸಿ ವರ್ಲ್ಡ್ ಕಪ್ ಕ್ರಿಕೆಟ್ ಟೂರ್ನಿಯ ಬಳಿಕ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅವರನ್ನು ನಾಯಕತ್ವದಿಂದ ಕೆಳಗಿಳಿಸಬೇಕು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ನಡುವೆ ಪಾಕ್ನ ಮಾಜಿ ವೇಗಿವೋರ್ವರು ಕೊಹ್ಲಿ ಪರ ಬ್ಯಾಟಿಂಗ್ ಮಾಡಿದ್ದಾರೆ.
'ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ತೆಗೆದುಹಾಕಬೇಕೆನ್ನುವವರು ಮೂರ್ಖರು' - Shoaib Akhta News
ಕೊಹ್ಲಿ ಅವರನ್ನು ನಾಯಕತ್ವ ಸ್ಥಾನದಿಂದ ತೆಗೆದುಹಾಕಬಾರದು ಎಂದು ನಾನು ಭಾವಿಸುತ್ತೇನೆ. ಏಕೆಂದರೆ, ಕೊಹ್ಲಿ ಅದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ವಿರಾಟ್, ಕಳೆದ ಮೂರು- ನಾಲ್ಕು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಟೀಂನ ಮಾಜಿ ವೇಗಿ ಶೋಯೆಬ್ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.
ಕೊಹ್ಲಿ ಅವರನ್ನು ನಾಯಕತ್ವ ಸ್ಥಾನದಿಂದ ತೆಗೆದುಹಾಕಬಾರದು ಎಂದು ನಾನು ಭಾವಿಸುತ್ತೇನೆ. ಏಕೆಂದರೆ, ಅವರು ಅದಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ. ವಿರಾಟ್, ಕಳೆದ ಮೂರು-ನಾಲ್ಕು ವರ್ಷಗಳಿಂದ ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಟೀಂನ ಮಾಜಿ ವೇಗಿ ಶೋಯೆಬ್ ಅಖ್ತರ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.
ವಿರಾಟ್ಗೆ ಬೇಕಾಗಿರುವುದು ಉತ್ತಮ ತರಬೇತುದಾರ ಮತ್ತು ಉತ್ತಮ ಆಯ್ಕೆ ಸಮಿತಿ. ಇದು ಸಿಕ್ಕ ಬಳಿಕ ಅವರು ಸುಧಾರಣೆಗೊಳ್ಳಲಿದ್ದಾರೆ. ಬಿಸಿಸಿಐನಿಂದ ಅಗತ್ಯವಾದ ಸಹಾಯಕ ಸಿಬ್ಬಂದಿ ಪಡೆದ ನಂತರ ಕೊಹ್ಲಿ ತಮ್ಮ ಸಾಮರ್ಥ್ಯ ತೋರಲಿದ್ದಾರೆ. ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಆದರೆ, ಕೊಹ್ಲಿ ನಾಯಕತ್ವಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಶೋಯೆಬ್ ಹೇಳಿದ್ದಾರೆ.