ಮುಂಬೈ:ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ 100 ಬಡ ಮಕ್ಕಳ ಚಿಕಿತ್ಸೆಗೆ ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ಆರ್ಥಿಕವಾಗಿ ನೆರವಾಗಿದ್ದಾರೆ.
ಏಕಂ ಫೌಂಡೇಷನ್ ಸಹಯೋಗದಲ್ಲಿ ಸಚಿನ್ ಬಡ ಮಕ್ಕಳಿಗೆ ನೆರವಾಗಿದ್ದಾರೆ. ಈ ಫೌಂಡೇಷನ್ ಸರ್ಕಾರಿ ಮತ್ತು ಟ್ರಸ್ಟ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಮಕ್ಕಳನ್ನು ಕೇಂದ್ರೀಕರಿಸಿ ನೆರವಾಗಲಿದೆ ಎಂದು ತಿಳಿದು ಬಂದಿದೆ.