ಲಾಹೋರ್:ಪಾಕಿಸ್ತಾನ ಕ್ರಿಕೆಟ್ ತಂಡದ ಖ್ಯಾತ ಲೆಗ್ ಸ್ಪಿನ್ನರ್ ಅಬ್ದುಲ್ ಖಾದಿರ್ ಖಾನ್ (63) ವಯಸ್ಸಿನಲ್ಲಿ ಹೃದಯಾಘಾತದನಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಪಾಕ್ ಪರ 67 ಟೆಸ್ಟ್ ಪಂದ್ಯ ಹಾಗೂ 104 ಏಕದಿನ ಪಂದ್ಯಗಳನ್ನಾಡಿರುವ ಇವರು, 1977 ಡಿಸೆಂಬರ್ 14ರಂದು ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನಾಡುವ ಮೂಲಕ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ 1983ರಲ್ಲಿ ಏಕದಿನ ಪಂದ್ಯವನ್ನಾಡುವ ಮೂಲಕ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
ಟೆಸ್ಟ್ ಪಂದ್ಯಗಳಿಂದ 236 ವಿಕೆಟ್ ಹಾಗೂ ಏಕದಿನ ಪಂದ್ಯದಲ್ಲಿ 132 ವಿಕೆಟ್ ಪಡೆದಿರುವ ಇವರು, ಪಾಕ್ ಪರ ಅತ್ಯಂತ ಯಶಸ್ವಿ ಬೌಲರ್ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. 1987ರಲ್ಲಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 9ವಿಕೆಟ್ ಪಡೆದುಕೊಂಡಿರುವುದು ಇವರ ಜೀವನ ಶ್ರೇಷ್ಠ ಸಾಧನೆಯಾಗಿದೆ. ಜತೆಗೆ ಪಾಕಿಸ್ತಾನ ಕ್ರಿಕೆಟ್ನ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಸಹ ಇವರು ಸೇವೆ ಸಲ್ಲಿಸಿದ್ದಾರೆ.
ಸಚಿನ್ ತೆಂಡೂಲ್ಕರ್ ಪಾಕಿಸ್ತಾನ ವಿರುದ್ಧ 1989ರಲ್ಲಿ ಮೊದಲು ಪಂದ್ಯವನ್ನಾಡಿದಾಗ ಅಬ್ದುಲ್ ಖಾದಿರ್ ಬೌಲಿಂಗ್‌ನಲ್ಲಿ ನಾಲ್ಕು ಸಿಕ್ಸರ್ ಬಾರಿಸಿದ್ದರು.ಅಬ್ದುಲ್ ಖಾದಿರ್‌ಗೆ ಪತ್ನಿ, ನಾಲ್ವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಪುತ್ರಿಯನ್ನು ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಉಮರ್ ಅಕ್ಮಲ್ ಮದುವೆಯಾಗಿದ್ದಾರೆ. ಇವರ ನಿಧನಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಂತಾಪ ಸೂಚನೆ ಮಾಡಿ ಟ್ವೀಟ್ ಮಾಡಿದ್ದು, ಪಾಕ್ನ ಅನೇಕ ಕ್ರಿಕೆಟರ್ಸ್ ಸಂತಾಪ ಸೂಚಿಸಿದ್ದಾರೆ.