ಕರಾಚಿ:ಕೊರೊನಾ ಸೋಂಕಿಗೊಳಗಾಗಿದ್ದ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಸನಾ ಮಿರ್ ಇದೀಗ ಚೇತರಿಸಿಕೊಂಡಿದ್ದು, ಕೋವಿಡ್ ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಟ್ವೀಟ್ ಮಾಡಿದ ಪಾಕ್ ಮಾಜಿ ಕ್ಯಾಪ್ಟನ್
ತಾವು ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿರುವುದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಸನಾ, ನಿಮ್ಮ ಪ್ರೀತಿ ಹಾಗೂ ಶುಭ ಹಾರೈಕೆಗಳಿಗೆ ಧನ್ಯವಾದಗಳು. ಇದೀಗ ಕೊರೊನಾ ನೆಗೆಟಿವ್ ವರದಿ ಬಂದಿದೆ. ಕೊರೊನಾ ಸಂದರ್ಭದಲ್ಲಿ ಮನೆಯವರೊಂದಿಗೆ ಸಮಯ ಕಳೆದಿದ್ದು, ಇದೀಗ ಕೆಲಸಕ್ಕೆ ಹಾಜರಾಗುತ್ತೇನೆ ಎಂದಿದ್ದಾರೆ.